ಗೋಣಿಕೊಪ್ಪ: ಸೆಂಟ್ ಥೋಮಸ್ ಚರ್ಚ್ ಹಾಗೂ ಸ್ಮಶಾನಕ್ಕೆ ತೆರಳುವ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

ಗೋಣಿಕೊಪ್ಪ: ಸೆಂಟ್ ಥೋಮಸ್ ಚರ್ಚ್ ಹಾಗೂ ಸ್ಮಶಾನಕ್ಕೆ ತೆರಳುವ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ  ಭೂಮಿಪೂಜೆ

ಗೋಣಿಕೊಪ್ಪಲು :ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಕೊಡಗು ಜಿಲ್ಲೆಗೆ ಬಿಡುಗಡೆಯಾದ 75 ಕೋಟಿ ರೂಪಾಯಿಗಳ ಅನುದಾನದಲ್ಲಿ ಸುಮಾರು ಏಳು ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಗೋಣಿಕೊಪ್ಪಲಿನ ಸೆಂಟ್ ಥೋಮಸ್ ಚರ್ಚ್ ಹಾಗೂ ಸ್ಮಶಾನಕ್ಕೆ ತೆರಳುವ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಅವರು ಭೂಮಿ ಪೂಜೆ ನೆರವೇರೀಸಿದರು.

 ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು, ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಈಗಾಗಲೇ 1266 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿದ್ದು, ಶಾಸಕರ ಹುಟ್ಟು ಹಬ್ಬದ ಸಂದರ್ಭ ಶಾಸಕರು ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತು ವಾಗ್ದಾನ-ಅನುಷ್ಠಾನ ಪುಸ್ತಕ ಬಿಡುಗಡೆಗೊಳಿಸಿದ್ದು, ಮುಂದಿನ ದಿನಗಳಲ್ಲಿ ಶಾಸಕರಿಂದ ಇನ್ನೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ವಿಲ್ಸನ್ ಸಿ. ಜೆ ಅವರು ಮಾತನಾಡಿ, ಸುಮಾರು 10-20 ವರ್ಷಗಳಿಂದ ರಸ್ತೆ ಕಾಮಗಾರಿ ನಡೆಸಬೇಕೆಂಬ ಬೇಡಿಕೆ ಇತ್ತು. ಇದೀಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅವರ ಮೂಲಕ ಕಾಮಗಾರಿ ಅನುಷ್ಠಾನಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು,

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ. ಜೆ ಬಾಬು ಅವರು ಮಾತನಾಡಿ, ರಸ್ತೆ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳುವಂತೆ ಹೇಳಿದರು.

ಈ ಸಂದರ್ಭ ಗೋಣಿಕೊಪ್ಪ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಎಂ. ಮಂಜುಳಾ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಮ್ಮಡ ಸೋಮಣ್ಣ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜುನೈದ್, ಉಪಾಧ್ಯಕ್ಷ ಅಲೀರ ಕೆ.ನಸೀರ್ ಬಾಜಿ, ಸೆಂಟ್ ಥೋಮಸ್ ಚರ್ಚ್ ಪ್ರಮುಖರಾದ ಅಂಥೋಣಿ, ಜಾನ್ಸನ್ ಹಾಗೂ ಮತ್ತಿತರರು ಇದ್ದರು.

ವರದಿ: ಚಂಪಾ ಗಗನ, ಪೊನ್ನಂಪೇಟೆ