ಗೋಣಿಕೊಪ್ಪ:ಶಾಸಕ ಎಎಸ್ ಪೊನ್ನಣ್ಣ ಅವರ ಹುಟ್ಟು ಹಬ್ಬ ಆಚರಣೆ: 67 ಮಂದಿ ವಿಶೇಷ ಸಾಧನ ಸಲಕರಣೆಗಳ ವಿತರಣೆ

ಗೋಣಿಕೊಪ್ಪಲು:ವಿಶೇಷ ಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ವತಿಯಿಂದ ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಹಾಗೂ ಗೋಣಿಕೊಪ್ಪ ಗ್ರಾಮ ಪಂಚಾಯತಿ ಸಹಯೋಗದಲ್ಲಿ ವಿಶೇಷ ಚೇತನ ಹಾಗೂ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಗೋಣಿಕೊಪ್ಪದ ಸ್ವಾತಂತ್ರ್ಯ ಹೋರಾಟಗಾರರ ಸಭಾಂಗಣದಲ್ಲಿ ಆಯೋಜಿತ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು, ವಿಶೇಷ ಚೇತನರ ನಮ್ಮ ನಿಮ್ಮಂತೆ ಜೀವನ ನಡೆಸುವಂತಹ ವ್ಯವಸ್ಥೆ ಕಲ್ಪಿಸಲು ನಾವೆಲ್ಲರೂ ಮುಂದಾಗಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ 67 ಮಂದಿ ವಿಶೇಷ ಚೇತನರಿಗೆ ಆರು ಲಕ್ಷ ರೂಪಾಯಿಗಳ 116 ಸಾಧನ ಸಲಕರಣೆಗಳನ್ನು ಶಾಸಕ ಪೊನ್ನಣ್ಣ ಅವರು ವಿತರಿಸಿದರು.
ಇದೇ ಸಂದರ್ಭ ಶಾಸಕ ಅಜ್ಜಿಕುಟ್ಟೀರ ಪೊನ್ನಣ್ಣ ಅವರ 51ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಹುಟ್ಟುಹಬ್ಬದ ಕೇಕ್ ಕತ್ತರಿಸಿ, ಸಂಭ್ರಮಿಸಲಾಯಿತು. ಕಾರ್ಯಕ್ರಮದಲ್ಲಿ ಹಾಜರಿದ್ದವರು ಶಾಸಕರಿಗೆ ಹೂಗುಚ್ಚ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ಶಾಸಕ ಪೊನ್ನಣ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಪೌರ ಕಾರ್ಮಿಕರು ಅಂಬೇಡ್ಕರ್ ಅವರ ಪ್ರತಿಮೆಯನ್ನು ಪೊನ್ನಣ್ಣ ಅವರಿಗೆ ನೆನಪಿನ ಕಾಣಿಕೆಯಾಗಿ ನೀಡುವ ಮೂಲಕ ಶಾಸಕರನ್ನು ಸನ್ಮಾನಿಸಿದರು. ಈ ಸಂದರ್ಭ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಗೋಣಿಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷೆ ಮಂಜುಳ, ಸದಸ್ಯರಾದ ಚೆಪ್ಪುಡಿರ ದ್ಯಾನ್ ಸುಬ್ಬಯ್ಯ ,ಸಫುರಾ ಭಾನು, ಸುಲೇಖ, ಅಪ್ಸರ, ಸ್ವಾಮಿ ವಿವೇಕಾನಂದ ಯೂತ್ ಮೊಮೆಂಟ್ ವ್ಯವಸ್ಥಾಪಕ ಡಾ, ಚಂದ್ರ ಶೇಖರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪಿ. ಕೆ ಪೊನ್ನಪ್ಪ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ, ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನೂರೇರ ಪದವಿ ಧನ್ಯ , ಅಂಕಿತ್ ಪೊನ್ನಪ್ಪ, ಪೊನ್ನಂಪೇಟೆ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಖಾಲಿದ್, ಕೆಡಿಪಿ ಸದಸ್ಯ ಕೊಳ್ಳಿಮಾಡ ಅಜಿತ್ ಅಯ್ಯಪ್ಪ, ಅಬ್ದುಲ್ ಸಮದ್, ಅಜ್ಜಿಕುಟ್ಟೀರ ನರೇನ್ ಕಾರ್ಯಪ್ಪ, ಶಾಸಕ ಪೊನ್ನಣ್ಣ ಅವರ ಪತ್ನಿ ಕಾಂಚನ ಪೊನ್ನಣ್ಣ , ಪ್ರಮುಖರಾದ ಕಾಡ್ಯಮಾಡ ಕುಸುಮ ಜೋಯಪ್ಪ, ಎಸ್ ಬೋಪಣ್ಣ, ಅಧಿಕ್ ಸಂಸ್ಥೆಯ ಪದಾಧಿಕಾರಿಗಳು, ಇಲಾಖಾಧಿಕಾರಿಗಳು, ಹಿರಿಯ ನಾಗರಿಕರು, ಕಾಂಗ್ರೆಸ್ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ವರದಿ: ಚಂಪಾ ಗಗನ, ಪೊನ್ನಂಪೇಟೆ.