ಗೋಣಿಕೊಪ್ಪ ಶ್ರೀ ಕಾವೇರಿ ದಸರಾ ಉತ್ಸವದ ಕಾರ್ಯಕ್ರಮ ಪಟ್ಟಿ ಬಿಡುಗಡೆ
admincoorgdaily

ಗೋಣಿಕೊಪ್ಪ: ಗೋಣಿಕೊಪ್ಪಲಿನ ಪ್ರಸಿದ್ಧ ಶ್ರೀ ಕಾವೇರಿ ದಸರಾ ಮಹೋತ್ಸವದ ಕಾರ್ಯಕ್ರಮ ಪಟ್ಟಿಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಬಿಡುಗಡೆಗೊಳಿಸಿದರು.
ಗೋಣಿಕೊಪ್ಪ ಶ್ರೀ ಕಾವೇರಿ ದಸರಾ ಸಮಿತಿಯ ಸದಸ್ಯರು ಇಂದು ಶಾಸಕರ ಗೃಹ ಕಚೇರಿಯಲ್ಲಿ ಭೇಟಿಯಾಗಿ ಕಾರ್ಯಕ್ರಮ ಪಟ್ಟಿಯನ್ನು ಬಿಡುಗಡೆ ಮಾಡಿಸಿದರು.
ಈ ಸಂದರ್ಭದಲ್ಲಿ ಶ್ರೀ ಕಾವೇರಿ ದಸರಾ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಎ.ಎಸ್. ಪೊನ್ನಣ್ಣ, ದಸರಾ ಉತ್ಸವದ ವಿವಿಧ ಕಾರ್ಯಕ್ರಮಗಳ ವೇಳಾಪಟ್ಟಿಯನ್ನು ಸಾರ್ವಜನಿಕರ ಗಮನಕ್ಕೆ ಅನಾವರಣಗೊಳಿಸಿ ದಸರಾ ಮಹೋತ್ಸವದ ಯಶಸ್ಸಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಕಾವೇರಿ ದಸರಾ ಸಮಿತಿಯ ಕಾರ್ಯಾಧ್ಯಕ್ಷ ಕುಳಚಂಡ ಪ್ರಮೋದ್ ಗಣಪತಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ಚಂಗಪ್ಪ, ಸಮಿತಿ ಸಂಚಾಲಕ ಕೊಕ್ಕಂಡ ರೋಷನ್, ಸಂಯೋಜಕ ಚಂದನ್ ಕಾಮತ್, ಶೀಲಾ ಬೋಪಣ್ಣ, ಪ್ರಧಾನ ಕಾರ್ಯದರ್ಶಿ ಬಿ.ಎಂ. ಪ್ರಕಾಶ್, ನಿರ್ದೇಶಕಿ ಚಂದನ ಮಂಜುನಾಥ್, ಕಾರ್ಯದರ್ಶಿ ವರಮಹಾಲಕ್ಷ್ಮಿ, ನಿರ್ದೇಶಕರಾದ ಶಾಕೀಲ್, ವಾಮನ್ ಉಪಸ್ಥಿತರಿದ್ದರು.