ಗೋಣಿಕೊಪ್ಪಲು: ಹಿರಿಯ ಕಾಂಗ್ರೆಸ್ ಮುಖಂಡ ಟಿ.ಕೆ. ಖಾಲಿದ್ ನಿಧನ
admincoorgdaily

ಗೋಣಿಕೊಪ್ಪಲು: ಗೋಣಿಕೊಪ್ಪಲು ಮೂರನೇ ವಿಭಾಗದ ನಿವಾಸಿ, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸದಸ್ಯ, ಸಮಾಜ ಸೇವಕ, ಹಿರಿಯ ಕಾಂಗ್ರೆಸ್ ಮುಖಂಡ ಟಿ.ಕೆ. ಖಾಲಿದ್ ಅವರು ಇಂದು ಸಂಜೆ 3.30ಕ್ಕೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ಅಪಾರ ಅಭಿಮಾನಿಗಳು, ಸ್ನೇಹಿತರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಕಾಲಿಕ ನಿಧನ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಪೊನ್ನಂಪೇಟೆ ತಾಲೂಕು ಕೆಡಿಪಿ ಸದಸ್ಯ ಕೊಳ್ಳಿಮಾಡ ಅಜಿತ್ ಅಯ್ಯಪ್ಪ ಹಾಗೂ ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಪ್ರಾಧಿಕಾರ ಅಧ್ಯಕ್ಷ ಕಾಳಿಮಾಡ ಪ್ರಶಾಂತ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.