Kodagu

ಕ್ರಿಶ್ಚಿಯನ್ ಸಮುದಾಯಕ್ಕೆ ಗುಡ್ ನ್ಯೂಸ್: ವಿವಿಧ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನ

admincoorgdaily

ಕ್ರಿಶ್ಚಿಯನ್ ಸಮುದಾಯಕ್ಕೆ ಗುಡ್ ನ್ಯೂಸ್: ವಿವಿಧ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನ

      ಮಡಿಕೇರಿ:-ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ    2026-27ನೇ ಸಾಲಿನ ಕ್ರಿಶ್ಚಿಯನ್ ಜನಾಂಗದವರಿಗೆ ಅರಿವು, ಫಾಸ್ಟ್ ಫುಡ್ ಟ್ರಕ್, ಸ್ವ ಸಹಾಯ ಸಂಘಗಳಿಗೆ ಸಹಾಯಧನ ಯೋಜನೆಯಡಿ ಸಾಲ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

      ನಿಗಮದ ವೆಬ್‍ಸೈಟ್ https://kccdclonline.karnataka.gov.in/  ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಎಫ್‍ಎಂಸಿ ಕಾಲೇಜು ರಸ್ತೆ, ಮಡಿಕೇರಿ ಇಲ್ಲಿಗೆ ಭೇಟಿ ನೀಡಬಹುದು ಹಾಗೂ ದೂ.ಸಂ.08272-201449 ನ್ನು ಸಂಪರ್ಕಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್, 31 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.