Kodagu

ಹೆಬ್ಬಾಲೆ ಶಾಲೆಯಲ್ಲಿ ಹಸಿರು ದೀಪಾವಳಿ ಆಚರಣೆ; ಸ್ವಸ್ಥ, ಸ್ವಚ್ಛ ದೀಪಾವಳಿ ಆಚರಣೆಗೆ ಟಿ.ಜಿ.ಪ್ರೇಮಕುಮಾರ್ ಮನವಿ

admincoorgdaily

ಹೆಬ್ಬಾಲೆ  ಶಾಲೆಯಲ್ಲಿ  ಹಸಿರು ದೀಪಾವಳಿ ಆಚರಣೆ;  ಸ್ವಸ್ಥ, ಸ್ವಚ್ಛ ದೀಪಾವಳಿ ಆಚರಣೆಗೆ ಟಿ.ಜಿ.ಪ್ರೇಮಕುಮಾರ್ ಮನವಿ
ಕುಶಾಲನಗರ: 
ಬೆಳಕಿನ ಹಬ್ಬ ದೀಪಾವಳಿ ಹಬ್ಬ ಸಂದರ್ಭದಲ್ಲಿ ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು 
ಮಕ್ಕಳು ಹಾಗೂ ಸಾರ್ವಜನಿಕರು ಪರಿಸರ ಸ್ನೇಹಿ ಹಸಿರು ಹಾಗೂ ಸುರಕ್ಷಿತ ರೀತಿಯಲ್ಲಿ ಹಬ್ಬವನ್ನು ಆಚರಿಸುವ ಕುರಿತು ಶಾಲಾ- ಕಾಲೇಜು ಹಾಗೂ ಸಮುದಾಯದಲ್ಲಿ ಜನಜಾಗೃತಿ ಮೂಡಿಸಲಾಗುತ್ತಿದೆ.

     ಉತ್ತರ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ತು, ರಾಷ್ಟ್ರೀಯ ಹಸಿರು ಪಡೆ ಬನಶಂಕರಿ ಇಕೋ ಕ್ಲಬ್, ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆ ಹಾಗೂ ಜಿಲ್ಲಾ ಪರಿಸರ ಜಾಗೃತಿ ಸಮಿತಿಯ ಆಶ್ರಯದಲ್ಲಿ 
    "ಸ್ವಸ್ಥ ಹಾಗೂ ಸ್ವಚ್ಛ" ಹಸಿರು ದೀಪಾವಳಿ 2026 ಆಚರಣೆ ಅಂಗವಾಗಿ ಶುಕ್ರವಾರ ಏರ್ಪಡಿಸಿದ್ದ ಹಸಿರು ದೀಪಾವಳಿ ಆಚರಣೆ ಜನಜಾಗೃತಿ ಕಾರ್ಯಕ್ರಮದಲ್ಲಿ
ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕರೂ ಆದ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್,
 ಪಟಾಕಿ ಸಿಡಿಸುವುದರಿಂದ ಆಗುವ ದುಷ್ಪರಿಣಾಮಗಳು ಹಾಗೂ ಹಸಿರು ದೀಪಾವಳಿ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದರು.

     ಬೆಳಕಿನ ಹಬ್ಬ ದೀಪಾವಳಿ ಹಬ್ಬ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು
ಇಂದು ಸ್ವಚ್ಛ, ಸ್ವಸ್ಥ, ಸುರಕ್ಷಿತ ಮತ್ತು ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸುವ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದರು.

  ಅತಿಯಾದ ಮತ್ತು ವಿಷಾನಿಲ ಹೊರಸೂಸುವ ಮಾಲಿನ್ಯಕಾರಿ
ಪಟಾಕಿಗಳ ಬಳಕೆಯು ಮಕ್ಕಳು, ಹಿರಿಯ ನಾಗರಿಕರು, ಉಸಿರಾಟದ ಸೂಕ್ಷ್ಮತೆ ಹೊಂದಿರುವ ವ್ಯಕ್ತಿಗಳು, ಪ್ರಾಣಿಗಳು ಮತ್ತು ಪಕ್ಷಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಮತ್ತು ವಾಯು ಮತ್ತು ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತದೆ ಎಂದರು.

ಬೆಳಕಿನ ಹಬ್ಬ ದೀಪಾವಳಿ ಹಬ್ಬ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಪರಿಸರ ಸ್ನೇಹಿ ಹಸಿರು ಹಾಗೂ ಸುರಕ್ಷಿತ ರೀತಿಯಲ್ಲಿ ಹಬ್ಬವನ್ನು ಆಚರಿಸಬೇಕಿದೆ ಎಂದು ಪರಿಸರ ಪ್ರೇಮಿಯೂ ಆದ ಟಿ.ಜಿ.ಪ್ರೇಮಕುಮಾರ್ ಹೇಳಿದರು.

    ಶಾಲಾ ಮುಖ್ಯೋಪಾಧ್ಯಾಯ ಎಚ್.ಎಂ.ವೆಂಕಟೇಶ್  ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಮನೆಯಲ್ಕಿ ಮಾಲಿನ್ಯಕಾರಿ ಪಟಾಕಿ ತ್ಯಜಿಸಿ ಹಣತೆ ಬೆಳೆಗಿಸುವ ಮೂಲಕ ದೀಪಾವಳಿ ಆಚರಿಸಿ. ಪೋಷಕರು ಮತ್ತು ಜನರಿಗೆ ಹಸಿರು ದೀಪಾವಳಿ ಆಚರಣೆ ಕುರಿತು ಜಾಗೃತಿ ಮೂಡಿಸಬೇಕು ಎಂದರು.

  ಪರಿಸರಕ್ಕೆ ಹಾನಿಯಾಗದಂತೆ ಹಣತೆ ಬೆಳಗಿಸುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಣೆಯ ಮಹತ್ವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಕೆ.ಎಸ್.ರಮ್ಯ, ಪಟಾಕಿಗಳಿಂದ ಅತಿಯಾದ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಉಂಟಾಗುತ್ತದೆ. ಆದ್ದರಿಂದ ಪಟಾಕಿಗಳನ್ನು ಸಂಪೂರ್ಣವಾಗಿ ತ್ಯಜಿಸಿ. ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ತಿಳಿಸಿದರು.

   ಶಾಲೆಯ ವಿದ್ಯಾರ್ಥಿಗಳಾದ ಎಚ್.ವಿ.ಎಮೀಮ ಮತ್ತು
ಎಚ್.ಜಿ.ಹರ್ಷಿತ , ಹಸಿರು ದೀಪಾವಳಿ ಆಚರಣೆ ಕುರಿತು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
    ಶಾಲಾ ಶಿಕ್ಷಕರಾದ ಎಸ್.ಕೆ.ಶಿವಾನಂದ,
ಸಿ.ಎಂ.ಬಬಿತ, ಜಿ.ವನಜ, ಸುಜಾತ, ಎಚ್.ಪಿ.ಪ್ರತಿಮ ಇದ್ದರು.

     ವಿದ್ಯಾರ್ಥಿಗಳು ಹಸಿರು ದೀಪಾವಳಿ ಆಚರಣೆ ಕುರಿತಾದ ವಿವಿಧ ಘೋಷಣಾ ಫಲಕಗಳನ್ನು ಹಿಡಿದು ಪರಿಸರ ಜಾಗೃತಿ ಮೂಡಿಸಿದರು.
ಹಣತೆ ಬೆಳಗಿಸಿ- ದೀಪಾವಳಿ ಆಚರಿಸಿ, ಮಾಲಿನ್ಯಕಾರಿ ಪಟಾಕಿ ತ್ಯಜಿಸಿ ಪರಿಸರ ಉಳಿಸಿ, ಹಸಿರು ದೀಪಾವಳಿ ಆಚರಿಸಿ, ಸ್ವಸ್ಥ, ಸ್ವಸ್ಛ ದೀಪಾವಳಿ ಆಚರಣೆ ನಮ್ಮೆಲ್ಲರ ಹೊಣೆ ಎಂಬಿತ್ಯಾದಿ ಘೋಷಣೆಗಳನ್ನು ಪ್ರಚುರಪಡಿಸಲಾಯಿತು.