Kodagu

ಕುಶಾಲನಗರ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

admincoorgdaily

ಕುಶಾಲನಗರ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ
ಕುಶಾಲನಗರ, ನ.9: 
ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಇಕೋ ಕ್ಲಬ್, ಭಾರತ್ ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ, ರಾಜ್ಯ ವಿಜ್ಞಾ ಪರಿಷತ್ ಘಟಕ ಹಾಗೂ ಜಿಲ್ಲಾ ಪರಿಸರ ಜಾಗೃತಿ ಸಮಿತಿಯ ವತಿಯಿಂದ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಬಗ್ಗೆ ಜನಜಾಗೃತಿ ಮೂಡಿಸಲಾಯಿತು.
ಹಸಿರು ದೀಪಾವಳಿ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ಭಾರತ್ ಸ್ಕೌಟ್ಸ್, ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿಯೂ ಆದ ಪರಿಸರ ಕಾರ್ಯಕ್ರಮಗಳ ಸಂಘಟಕ ಟಿ.ಜಿ.ಪ್ರೇಮಕುಮಾರ್, ಮಾಲಿನ್ಯಕಾರಿ ಪಟಾಕಿ ಸಿಡಿಸುವುದರಿಂದ ಉಂಟಾಗುವ ಮಾಲಿನ್ಯದ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು.

ಹಸಿರು ದೀಪಾವಳಿ
ಆಚರಣೆಯು ಪರಿಸರವನ್ನು ಮಾಲಿನ್ಯದಿಂದ ರಕ್ಷಿಸುವ ಮತ್ತು ಜವಾಬ್ದಾರಿಯುತವಾಗಿ ಹಬ್ಬವನ್ನು ಆಚರಿಸುವ ಒಂದು ಪ್ರಮುಖ ಸಂಕಲ್ಪವಾಗಿದೆ ಎಂದು ತಿಳಿಸಿದರು.

ಪ್ರತಿಜ್ಞಾ ವಿಧಿ ಸ್ವೀಕರಿಸಿದ
ವಿದ್ಯಾರ್ಥಿಗಳು,  ನಾವು ಪರಿಸರ ಕಾಳಜಿಯನ್ನು ಹೊಂದಿರುವ ಜವಾಬ್ದಾರಿಯುತ ಭಾರತದ ಪ್ರಜೆಯಾಗಿ, ಈ ದೀಪಾವಳಿ ಹಬ್ಬವನ್ನು ಪ್ರಕೃತಿಯೊಂದಿಗೆ ಪ್ರೀತಿಯಿಂದ ಆಚರಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು.

ನಂತರ ವಿದ್ಯಾರ್ಥಿಗಳು ಹಸಿರು ದೀಪಾವಳಿ ಆಚರಣೆಯ ಕುರಿತಂತೆ
ಹಣತೆ ಬೆಳಗಿಸಿ
ಹಸಿರು ದೀಪಾವಳಿ ಆಚರಿಸಿ.
ಹಸಿರು ದೀಪಾವಳಿ 
ಮಾಲಿನ್ಯ ಮುಕ್ತ ದೀಪಾವಳಿ,
ಮಾಲಿನ್ಯಕಾರಿ ಪಟಾಕಿ ತ್ಯಜಿಸಿ
ಪರಿಸರ ಸಂರಕ್ಷಿಸಿ, ಸುರಕ್ಷಿತ ಮತ್ತು ಹಸಿರು ದೀಪಾವಳಿ ಆಚರಿಸೋಣ ಬನ್ನಿ ಎಂಬಿತ್ಯಾದಿ ಘೋಷಣೆಗಳ ಭಿತ್ತಿಫಲಕಗಳನ್ನು ಹಿಡಿದು ಜಾಗೃತಿ ಮೂಡಿಸಿದರು.

ಬೆಳಕಿನ ಹಬ್ಬ
ಕಾಲೇಜಿನ ಪ್ರಾಂಶುಪಾಲರಾದ ಬಿ.ಜಿ.ಶಾಂತಿ ಮಾತನಾಡಿ, ವಿದ್ಯಾರ್ಥಿಗಳು ಮಾಲಿನ್ಯಕಾರಿ ಪಟಾಕಿ ಸಿಡಿಸುವುದರಿಂದ ಉಂಟಾಗುವ ಅನಾಹುತಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
 ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎಸ್.ಎನ್.ರಾಜೇಂದ್ರ 
ಕಾರ್ಯಕ್ರಮ ಉದ್ಘಾಟಿಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವಕಾಮತ್,
ಕಸಾಪ ಪದಾಧಿಕಾರಿಗಳಾದ ಕೆ.ವಿ.ಉಮೇಶ್,
ಎಂ.ಎನ್.ಮೂರ್ತಿ,
ಉಪನ್ಯಾಸಕರಾದ ಟಿ.ಡಿ.ರಾಜ,
ಎಚ್.ಎಂ.ಸೋನಿಯ,
ಕೆ.ಎಲ್.ಅವಿನಾಶ್,
ಪ್ರಮೋದ್,  ಗ್ರಂಥಪಾಲಕ ಎಸ್.ನಂದೀಶ್ , ಶಿಕ್ಷಕಿಯರಾದ ಬಿ.ಬಿ.ಹೇಮಲತಾ 
ಹಾಗೂ ಸ್ನೇಹ ಬಸಮ್ಮ ಇದ್ದರು.