ನಿಡ್ತ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಸಿರು ದೀಪಾವಳಿ ಆಚರಣೆ
admincoorgdaily

ಶನಿವಾರಸಂತೆ:ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಮೀಪದ ನಿಡ್ತ ಸರ್ಕಾರಿ ಪ್ರೌಢ ಶಾಲೆಯ ನಿಸರ್ಗ ಇಕೋ ಕ್ಲಬ್ ವತಿಯಿಂದ "ಹಣತೆ ಹಚ್ಚೋಣ, ಪಟಾಕಿ ತ್ಯಜಿಸೋಣ" ಎಂಬ ಶೀರ್ಷಿಕೆಯಲ್ಲಿ ಹಸಿರು ದೀಪಾವಳಿ ಆಚರಿಸಲಾಯಿತು.
ವಿದ್ಯಾರ್ಥಿಗಳಿಗೆ ಹಸಿರು ದೀಪಾವಳಿಯ ಮಹತ್ವದ ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯ ಶಿಕ್ಷಕಿ ಎಂ.ಸಿ. ನಳಿನಿ ಅವರು, ಬೆಳಕಿನ ಹಬ್ಬ ದೀಪಾವಳಿಯನ್ನು ಸಾಂಪ್ರದಾಯಿಕವಾಗಿ ಹಣತೆ ಹಚ್ಚಿ ಆಚರಿಸಬೇಕು. ಆದರೆ ಪಟಾಕಿ ಹಚ್ಚಿ ಶಬ್ದ ಮಾಡಿ ಹಬ್ಬ ಆಚರಿಸುವುದರಿಂದ ಪರಿಸರ ಮಾಲಿನ್ಯಗೊಳ್ಳುತ್ತದೆ. ಪಟಾಕಿಯ ಶಬ್ದದಿಂದ ಪ್ರಾಣಿ-ಪಕ್ಷಿಗಳಿಗೆ ತೊಂದರೆಯಾಗುತ್ತದೆ. ಇದರ ಜೊತೆಯಲ್ಲಿ ಮನೆಯಲ್ಲಿರುವ ಹಿರಿಯರಿಗೆ, ಹೃದಯ ಸಂಬಂಧಿ ಸಮಸ್ಯೆ ಇರುವ ಸದಸ್ಯರಿಗೆ ಪಟಾಕಿ ಶಬ್ದದಿಂದ ತುಂಬಾ ತೊಂದರೆಯಾಗುತ್ತದೆ ಎಂದರು.
ಪಟಾಕಿ ಶಬ್ದದಿಂದ ಪರಿಸರಕ್ಕೆ ಮಾರಕವಾಗುತ್ತಿರುವ ನಿಟ್ಟಿನಲ್ಲಿ ಎಲ್ಲರೂ ಪಟಾಕಿ ತ್ಯಜಿಸಿ ಹಣತೆ ಹಚ್ಚಿ ಬೆಳಕಿನ ಹಬ್ಬ ದೀಪಾವಳಿಯನ್ನು ಹಸಿರು ಹಬ್ಬವನ್ನಾಗಿ ಆಚರಿಸಬೇಕು. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಹಸಿರು ದೀಪಾವಳಿಯ ಮಹತ್ವದ ಬಗ್ಗೆ ಪೋಷಕರಿಗೆ ಮತ್ತು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಜಾಗೃತಿಗೊಳಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಹಿರಿಯ ಶಿಕ್ಷಕರಾದ ಮಾರುತಿ ಅರೇರಾ, ಎಂ.ಸಿ. ರೂಪಾ, ಪ್ರಿಯಾಂಕ ಚಿಪಳೂಣಕರ್, ಸಂಗೀತಾ ಮುಂತಾದವರು ಹಾಜರಿದ್ದರು.