ಅರ್ವತೋಕ್ಲುನಲ್ಲಿ ಸಿಐಟಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ
admincoorgdaily

ಪೊನ್ನಂಪೇಟೆ: ಅರ್ವತೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಸಿಐಟಿ ಜಂಕ್ಷನ್‌ನಿಂದ ಸಿಐಟಿ ಕಾಲೇಜಿನವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಟಾಟು ಮೊಣ್ಣಪ್ಪ, ವಲಯ ಅಧ್ಯಕ್ಷ ಯಶ್ವಿನ್, ಪಕ್ಷದ ಪ್ರಮುಖರಾದ ಕೊಲ್ಲಿರ ಬೋಪಣ್ಣ, ಸುಗುಣ, ಅಜ್ಜಿಕುಟ್ಟಿರ ಪೊನ್ನು, ದಿಲ್ಲು, ಮಿಥುನ್, ಕುಂಡಚ್ಚಿರ ಮಂಜು ದೇವಯ್ಯ, ಗಣಪತಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.