Kodagu

ಹಳ್ಳದಿಣ್ಣೆ ಗ್ರಾಮದಲ್ಲಿ ₹25 ಲಕ್ಷ ವೆಚ್ಚದ ನೂತನ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ

admincoorgdaily

ಹಳ್ಳದಿಣ್ಣೆ ಗ್ರಾಮದಲ್ಲಿ ₹25 ಲಕ್ಷ ವೆಚ್ಚದ ನೂತನ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ
ಸೋಮವಾರಪೇಟೆ:ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳದಿಣ್ಣೆ ಗ್ರಾಮದ ಮುಖ್ಯ ರಸ್ತೆಯನ್ನು ₹25 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸುವ ಕಾಮಗಾರಿಗೆ ಮಾನ್ಯ ಶಾಸಕರಾದ  ಡಾ. ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ ಅಗತ್ಯ ಅನುದಾನವನ್ನು ಮೀಸಲಿಟ್ಟು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುವ ಮೂಲಕ ಜನರ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ದಶಕಗಳ ಬೇಡಿಕೆಯಾಗಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿ ಇದೀಗ ಸಾಕಾರಗೊಳ್ಳುತ್ತಿರುವುದಕ್ಕೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಬಿ.ಬಿ. ಸತೀಶ್, ಉಪಾಧ್ಯಕ್ಷರಾದ ಬಸವರಾಜು, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಪಿ. ಕುಮಾರ್ (ಉಲ್ಲಾಸ್), ಸುನಿಲ್, ಕೆ.ಡಿ. ಕುಮಾರ್, ಮಂಜುಳ, ಚಂದ್ರಿಕಾ ಕುಮಾರ್, ಅಬ್ದುಲ್ ರಜಾಕ್, ಆನಂದ್, ರಿಯಾಜ್, ಸ್ಥಳೀಯ ಪ್ರಮುಖರಾದ ಶಶಿಕುಮಾರ್, ಭಾಸ್ಕರ್, ಸುಂದರ, ಸೋಮಯ್ಯ, ರಘು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.