ಬಿರುನಾಣಿಯಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ಭೂಮಿಪೂಜೆ
admincoorgdaily

ಪೊನ್ನಂಪೇಟೆ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಭಾಗಕ್ಕೆ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೇಟಿ ನೀಡಿದರು.
ಬಿರುನಾಣಿ ಭಾಗದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕಾಗಿ ಶಾಸಕರ ವಿಶೇಷ ಅನುದಾನದಡಿ ₹30 ಲಕ್ಷ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದ್ದು, ಈ ಕಾಮಗಾರಿಗೆ ಇಂದು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಕ್ಷೇತ್ರದ ವಿವಿಧ ಭಾಗಗಳಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಎಲ್ಲಾ ರೀತಿಯ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಶಾಸಕರು ಹಲವು ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣವೂ ಮಹತ್ವದ ಯೋಜನೆಯಾಗಿದ್ದು, ಬಿರುನಾಣಿ ಭಾಗದಲ್ಲಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ, ಯೋಜನೆಯು ಯಶಸ್ವಿಯಾಗಿ ಪೂರ್ಣಗೊಳ್ಳಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ಡಿಸಿಸಿ ಸದಸ್ಯರು ಚೋಟ್ಟೆಯಂಡಮಾಡ ವಿಶು, ತಾಲೂಕು ಬಗರ್ ಹುಕುಂ ಅಧ್ಯಕ್ಷರಾದ ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ವಲಯ ಅಧ್ಯಕ್ಷರಾದ ಕುಪ್ಪಣ್ಣಮಾಡ ಪ್ರೀತಮ್, ಬೂತ್ ಅಧ್ಯಕ್ಷರುಗಳು ಕಳಕಂಡ ಜೀತು ಕುಶಾಲಪ್ಪ, ಬೊಟ್ಟಂಗಡ ಜಗದೀಶ್, ಪಂಚಾಯತ್ ಮಾಜಿ ಸದಸ್ಯರು ತಂಬಿ ನಾಣಯ್ಯ, ಪಕ್ಷದ ಮುಖಂಡರು ಅಣ್ಣಳ್ಳಮಾಡ ಹರೀಶ್ ಪೂವಯ್ಯ, ರೋಬಿನ್ ತಿಮ್ಮಯ್ಯ, ಗಿರೀಶ್, ರಾಜ, ಕುಂಡಚ್ಚಿರ ಮಂಜು ದೇವಯ್ಯ, ಕಾಳಿಮಾಡ ರಾಶಿಕ, ಬುಟೀಯಂಡ ಗಣಪತಿ, ಸುನಿತಾ, ಗೌತಮ್, ಚಿನ್ನಪ್ಪ, ಕರ್ತಮಾಡ ಸುಜು, ನೆಲ್ಲಿರ ಸೋಮಣ್ಣ, ಬಿರುನಾಣಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಣ್ಣಳ್ಳಮಾಡ ಅಮನ್ ತಮ್ಮಯ್ಯ, ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.