ಗೋಣಿಕೊಪ್ಪಲು ಅನುಗ್ರಹ ಬಡಾವಣೆಯಲ್ಲಿ ಕೀರೆ ಹೊಳೆ ತಡೆಗೋಡೆ ಕಾಮಗಾರಿಗೆ ಭೂಮಿಪೂಜೆ
admincoorgdaily

ಗೋಣಿಕೊಪ್ಪಲು: ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪಲು ಭಾಗದ ಅನುಗ್ರಹ ಬಡಾವಣೆಯ ಕೀರೆ ಹೊಳೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ರೂ.1 ಕೋಟಿ ವೆಚ್ಚದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಮಹಿಳಾ ಬ್ಲಾಕ್ ಅಧ್ಯಕ್ಷೆ ಆಶಾ ಪೂಣಚ್ಚ, ಗೋಣಿಕೊಪ್ಪಲು ಪಂಚಾಯಿತಿ ಮಾಜಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷೆ ಮಂಜುಳಾ, ಪೊನ್ನಂಪೇಟೆ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಎ.ಜೆ. ಬಾಬು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಪಂಕಜ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ನೂರೇರಾ ಪದವಿ ಧನ್ಯ, ಪಕ್ಷದ ಮುಖಂಡರುಗಳಾದ ವಿ.ಟಿ. ವಾಸು, ಧ್ಯಾನ್, ನಾಯಂದಿರ ಶಿವಾಜಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.