Kodagu

ಬೆಟ್ಟಗೇರಿಯಲ್ಲಿ ಪರಿಶಿಷ್ಟ ಪಂಗಡದ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಭೂಮಿಪೂಜೆ

admincoorgdaily

ಬೆಟ್ಟಗೇರಿಯಲ್ಲಿ ಪರಿಶಿಷ್ಟ ಪಂಗಡದ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಭೂಮಿಪೂಜೆ
*ಬೆಟ್ಟಗೇರಿಯಲ್ಲಿ ಪರಿಶಿಷ್ಟ ಪಂಗಡದ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಭೂಮಿಪೂಜೆ* 

ಕುಶಾಲನಗರ: ಕುಶಾಲನಗರ ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಸಮುದಾಯದ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಗ್ರಾಮದ ಪರಿಶಿಷ್ಟ ಪಂಗಡದ ಸಮುದಾಯದ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಸ್ಮಶಾನಕ್ಕೆ ಸುಗಮ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಈ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗ್ರಾಮೀಣ ಭಾಗದ ಜನರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಪ್ರತಿಯೊಂದು ಸಮುದಾಯದ ಅಗತ್ಯಗಳನ್ನು ಗುರುತಿಸಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಸಾರ್ವಜನಿಕರ ಬೇಡಿಕೆಗಳಿಗೆ ಸ್ಪಂದಿಸುವುದು ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದು ನಮ್ಮ ಬದ್ಧತೆಯಾಗಿದೆ ಎಂದು ತಿಳಿಸಿದರು.