Kodagu

ಕಕ್ಕಬ್ಬೆಯಲ್ಲಿ 3 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿಪೂಜೆ

admincoorgdaily

ಕಕ್ಕಬ್ಬೆಯಲ್ಲಿ 3 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿಪೂಜೆ
ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಕಕ್ಕಬೆ ಭಾಗದಲ್ಲಿ ₹3 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಇಂದು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೌಕತ್ ಆಲೀ, ವಲಯ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಮಡಿಕೇರಿ ತಾಲೂಕು ಕೆಡಿಪಿ ಸದಸ್ಯ ಬಾಚಮಾಂಡ ಲವ ಚಿಣ್ಣಪ್ಪ, ಪಕ್ಷದ ಪ್ರಮುಖರಾದ ಬಾಚಮಾಂಡ ರಾಜ ಪೂವಣ್ಣ, ಶೈಲಾ ಕುಟ್ಟಪ್ಪ, ಹರಿ ಮೊಣಪ್ಪ, ಬೀನಾ ಪೂವಯ್ಯ, ಕುಂಡಚ್ಚಿರ ಮಂಜು ದೇವಯ್ಯ, ಬಶೀರ್, ಶಾಫಿ, ಹ್ಯಾರೀಶ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.