ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಎಚ್.ಜೆ.ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಮಹೇಂದ್ರ ಆಯ್ಕೆ

ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಎಚ್.ಜೆ.ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಮಹೇಂದ್ರ  ಆಯ್ಕೆ
ಚಿತ್ರ1 ಅಧ್ಯಕ್ಷ... (ಚಿತ್ರ 2 ಪ್ರಧಾನ ಕಾರ್ಯದರ್ಶಿ)

ಕುಶಾಲನಗರ:ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸಂಪಾಜೆ‌ ಪ್ರೌಢಶಾಲೆಯ ಶಿಕ್ಷಕ ಎಚ್.ಜೆ.ಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬಸವನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಎಂ.ಎಸ್.ಮಹೇಂದ್ರ ಆಯ್ಕೆಯಾಗಿದ್ದಾರೆ.ಮಡಿಕೇರಿಯಲ್ಲಿ ಶನಿವಾರ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆಯಾಗಿದೆ. ಚುನಾವಣೆಯಾಧಿಕಾರಿಯಾಗಿ ಚೇರಂಬಾಣೆ ಅರುಣ ಪದವಿ ಪೂರ್ವ ಪಿಯೂ ಕಾಲೇಜಿನ ಪ್ರಾಂಶುಪಾಲ ಕೆ.ಆರ್.ರಮೇಶ್ ಕಾರ್ಯನಿರ್ವಹಿಸಿದರು.ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಹಿಂದಿನ ಅವಧಿಯ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಸಿ.ಟಿ. ಸೋಮಶೇಖರ್ ನಿವೃತ್ತಿಗೊಂಡ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಯ ಸ್ಥಾನಗಳಿಗೆ

 ಚುನಾವಣೆ ನಡೆಸಲಾಯಿತು.