ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ
admincoorgdaily

ಮಡಿಕೇರಿ: ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವತಿಯಿಂದ SCSP ಯೋಜನೆಯಡಿ ಮೊಬೈಲ್ ಕ್ಯಾಂಟೀನ್ ವಾಹನವನ್ನು ಹಸ್ತಾಂತರಿಸಲಾಯಿತು.
2024-25ನೇ ಸಾಲಿನ ಎಸ್.ಸಿ.ಎಸ್.ಪಿ. ಯೋಜನೆಯಡಿ Entrepreneurship Programme ನಲ್ಲಿ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಪಡೆದ ಹೆಬ್ಬಾಲೆ ಗ್ರಾಮದ ಎಚ್.ಎಸ್. ರಾಕೇಶ್ (ತಂದೆ ಸುರೇಶ್, ಬನಶಂಕರಿ ದೇವಸ್ಥಾನ ರಸ್ತೆ, ಕುಶಾಲನಗರ) ಅವರಿಗೆ ರೂ.5 ಲಕ್ಷ ಸಹಾಯಧನದ ಮೊಬೈಲ್ ಕ್ಯಾಂಟೀನ್ ವಾಹನವನ್ನು ಶಾಸಕ ಡಾ. ಮಂಥರ್ ಗೌಡ ಅವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಎಚ್.ಎನ್. ರಾಜಶೇಖರ್, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಶಶಿಧರ್ ಉಪಸ್ಥಿತರಿದ್ದರು ಎಂದು ಪ್ರಕಟಣೆ ತಿಳಿಸಿದೆ.