ಧಾರಾಕಾರ ಮಳೆಗೆ ಕೊಳಕೇರಿಯಲ್ಲಿ ಬರೆ ಜರಿದು ತಡೆಗೋಡೆ ಹಾನಿ

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು : ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಕೇರಿ ಗ್ರಾಮದಲ್ಲಿ ಸುರಿದ ಭಾರಿ ಮಳೆಗೆ ಗ್ರಾಮದ ನಿವಾಸಿ ಬೀಬಿ ಎಂಬುವವರ ವಾಸದ ಮನೆಯ ಮುಂಭಾಗ ಬರೆ ಜರಿದು ತಡಗೋಡೆ ಕುಸಿದು ಬಿದ್ದು ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕ ರವಿಕುಮಾರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.