ನಾಪೋಕ್ಲುವಿನಲ್ಲಿ ಸುರಿದ ಭಾರಿ ಮಳೆಗೆ ಬೇತು ರಸ್ತೆಯಲ್ಲಿರುವ ವಾಣಿಜ್ಯ ಕಟ್ಟಡದ ಬರೆ ಕುಸಿತ

ನಾಪೋಕ್ಲುವಿನಲ್ಲಿ ಸುರಿದ ಭಾರಿ ಮಳೆಗೆ ಬೇತು ರಸ್ತೆಯಲ್ಲಿರುವ ವಾಣಿಜ್ಯ ಕಟ್ಟಡದ ಬರೆ ಕುಸಿತ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲುವಿನಲ್ಲಿ ಬುಧವಾರ ಸುರಿದ ಧಾರಾಕಾರ ಮಳೆಗೆ ಬೇತು ರಸ್ತೆಯಲ್ಲಿರುವ ಹಸೈನಾರ್ ಎಂಬುವರಿಗೆ ಸೇರಿದ ಎಚ್ಎಮ್ ಪ್ಲಾಜಾ ವಾಣಿಜ್ಯ ಮಳಿಗೆಯ ಹಿಂಭಾಗದಲ್ಲಿರುವ ಬೃಹತ್ ಬರೆ ಕುಸಿದು ಬಿದ್ದಿದ್ದು ಕಟ್ಟಡ ಒಂದು ಬದಿಗೆ ಹಾನಿಯಾಗಿದೆ. ಈ ಬರೆಯ ಮೇಲ್ಭಾಗದಲ್ಲಿ ವಾಸದ ಮನೆ ಕೂಡ ಇದ್ದು ಪೂರ್ಣ ಪ್ರಮಾಣದಲ್ಲಿ ಬರೆ ಕುಸಿದರೆ ಅನಾಹುತ ಸಂಭವಿಸುವ ಸಾಧ್ಯತೆ ಕಂಡು ಬರುತ್ತಿದೆ.

 ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮ ಲೆಕ್ಕಿಗರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.