ಕಕ್ಕಬ್ಬೆ ಯುವಕಪಾಡಿ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಹಾರಿ ಹೋದ ಮನೆಯ ಶೀಟ್ ಗಳು: ಅಪಾರ ನಷ್ಟ

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ಕಕ್ಕಬ್ಬೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಲಾದ ಶೀಟ್ ಗಳು ಹಾರಿ ಹೋಗಿ ಅಪಾರ ನಷ್ಟ ಸಂಭವಿಸಿದೆ.ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯುವಕಪಾಡಿ ಗ್ರಾಮದ ನಿವಾಸಿ ಚಂಗಪ್ಪ ಎಂಬುವವರ ಮನೆಯ ಮೇಲ್ಚಾವಣಿಗೆ ಅಳವಡಿಸಿಲಾದ 9 ಸಿಮೆಂಟ್ ಶೀಟ್ ಗಳು ಬಾರಿ ಗಾಳಿ ಮಳೆಗೆ ಹಾರಿ ಹೋಗಿ ಅಪಾರ ನಷ್ಟ ಸಂಭವಿಸಿದೆ.
ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮ ಲೆಕ್ಕಿಗರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.