ಹೆಬ್ಬಾಲೆಯ ಕಾಂಗ್ರೆಸ್ ನಾಯಕ ಬಿಜೆಪಿಗೆ ಸೇರ್ಪಡೆ
admincoorgdaily

ಕುಶಾಲನಗರ: ಹೆಬ್ಬಾಲೆಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ್ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.
ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರ ಸಮ್ಮುಖದಲ್ಲಿ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಉದ್ದೇಶದಿಂದ ಬಿಜೆಪಿ ಪಕ್ಷಕ್ಕಾಗಿ ದುಡಿಯಲು ನಿರ್ಧರಿಸಿ, ಪಕ್ಷ ಸೇರ್ಪಡೆಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.