ಪೊನ್ನಂಪೇಟೆ ತಾಲೂಕು ಶ್ರೀಮಂಗಲದಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ
admincoorgdaily

ಪೊನ್ನಂಪೇಟೆ: ಪೊನ್ನಂಪೇಟೆ ತಾಲೂಕು ಶ್ರೀಮಂಗಲ ಭಾಗದ ಕೃಷ್ಣ ಕನ್ವೆನ್ಷನ್ ಹಾಲ್ ನಲ್ಲಿ ದಿನಾಂಕ 26-09-2026 ರ ಶನಿವಾರ ಬೆಳಿಗ್ಗೆ 10:30 ಗಂಟೆಗೆ ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ ನಡೆಯಲಿದೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಅಭಿಯಾನ ನಡೆಯಲಿದೆ.
ಶ್ರೀಮಂಗಲ ಹೋಬಳಿಯ ಎಲ್ಲಾ ನಾಗರಿಕರು ಸದರಿ ಅಭಿಯಾನದಲ್ಲಿ ಭಾಗವಹಿಸಿ, ತಮ್ಮ ಕುಂದು-ಕೊರತೆಗಳ ಅಹವಾಲು ಸಲ್ಲಿಸಿ, ಪರಿಹಾರ ಪಡೆದುಕೊಂಡು ಪ್ರಜಾಸೇವೆ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಕೋರಲಾಗಿದೆ.