ಕೊಡಗು ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ ; ಜಿಲ್ಲಾಧಿಕಾರಿ ಆದೇಶ
admincoorgdaily

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ದಿನಾಂಕ 21-10-2026 ರಂದು ದಸರಾ ಆಚರಣೆ ಹಾಗೂ ರಾತ್ರಿ ವೇಳೆ ದಶ ಮಂಟಪಗಳ ಶೋಭಾ ಯಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರಿಂದ ಮರುದಿನ ಶಾಲೆಗೆ ತೆರಳುವುದು ಕಷ್ಟಸಾಧ್ಯವಾಗಲಿದೆ ಎಂದು ನಾಗರಿಕರು, ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ರಜೆ ಕೋರಿ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ದಿನಾಂಕ 22-10-2026 ರಂದು ಕೊಡಗು ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮುಂದುವರೆದು, ಸದರಿ ರಜೆ ದಿನದ ಕರ್ತವ್ಯದ ಅವಧಿಯನ್ನು ಮುಂದಿನ ರಜಾ ದಿನದಂದು ನಿರ್ವಹಿಸಿ ಸರಿದೂಗಿಸಲು ಶಾಲೆಗಳಿಗೆ ಸೂಚಿಸಲಾಗಿದೆ.