ಭಾರೀ ಮಳೆಗೆ ಕಕ್ಕಬ್ಬೆ ಯುವಕಪಾಡಿ ಗ್ರಾಮದಲ್ಲಿ ಮನೆ ಕುಸಿತ

ಭಾರೀ ಮಳೆಗೆ ಕಕ್ಕಬ್ಬೆ ಯುವಕಪಾಡಿ ಗ್ರಾಮದಲ್ಲಿ ಮನೆ ಕುಸಿತ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು:ನಾಪೋಕ್ಲು ಬಳಿಯ ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯುವಕ ಪಾಡಿ ಗ್ರಾಮದಲ್ಲಿ ಸುರಿದ ಬಾರಿ ಮಳೆಗೆ ಮಣ್ಣಿನ ಮನೆ ಕುಸಿದು ಅಪಾರ ನಷ್ಟ ಸಂಭವಿಸಿದೆ.

ಯವಕಪಾಡಿ ಗ್ರಾಮದ ನಿವಾಸಿ ಪಾಲೆಯರ ಪಮ್ಮು ಎಂಬುವವರ ವಾಸದ ಮನೆಯು ಶುಕ್ರವಾರ ಸುರಿದ ಭಾರಿ ಮಳೆಗೆ ಸಂಪೂರ್ಣ ಕುಸಿದು ಬಿದ್ದು ಅಪಾರ ನಷ್ಟ ಸಂಭವಿಸಿದೆ. ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್,ಕಕ್ಕಬ್ಬೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಶೋಕ್ ಹಾಗೂ ಗ್ರಾಮ ಸಹಾಯಕ ಲಾಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.