State News

ಕೆಪಿಎಸ್‌ಸಿ ಸುಧಾರಣೆಗೆ ಸದನ ಸಮಿತಿ ವರದಿ ಸಲ್ಲಿಕೆ

admincoorgdaily

ಕೆಪಿಎಸ್‌ಸಿ ಸುಧಾರಣೆಗೆ ಸದನ ಸಮಿತಿ ವರದಿ ಸಲ್ಲಿಕೆ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಗಟ್ಟಲು ಹಾಗೂ ಮತ್ತಷ್ಟು ಸುಧಾರಣೆ ತರಲು ಸೂಕ್ತ ಶಿಫಾರಸ್ಸುಗಳೊಂದಿಗೆ ರಚನೆಯಾಗಿದ್ದ ಕರ್ನಾಟಕ ವಿಧಾನಸಭೆಯ ಸದನ ಸಮಿತಿಯ ವರದಿಯನ್ನು ಇಂದು ವಿಧಾನಸಭೆಯ ಸಭಾಧ್ಯಕ್ಷರಾದ ಶ್ರೀ ಜಿ.ಎಸ್. ಪಾಟೀಲ್ ಅವರಿಗೆ ಸಲ್ಲಿಸಲಾಯಿತು.

ದೇಶಪಾಂಡೆಯವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಸದನ ಸಮಿತಿಯು ಈ ವರದಿಯನ್ನು ಸಿದ್ಧಪಡಿಸಿದೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು, ಶ್ರೀ ಸುರೇಶ್ ಕುಮಾರ್, ಶ್ರೀ ಅರಗ ಜ್ಞಾನೇಂದ್ರ, ಶ್ರೀಮತಿ ರೂಪ ಶಶಿಕಲಾ ಹಾಗೂ ವಿಧಾನಸಭೆಯ ಅಧಿಕಾರಿಗಳು ಹಾಜರಿದ್ದರು.