Kodagu

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ: ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ ಕೆ.ಜಿ.ಬೋಪಯ್ಯ

admincoorgdaily

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ: ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ ಕೆ.ಜಿ.ಬೋಪಯ್ಯ
ಸಿದ್ದಾಪುರ:ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ಶನ್ಮುಗಂ ಎಂಬುವವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿ ಮನೆ ಸಂಪೂರ್ಣ ಹಾನಿಯಾಗಿದೆ.

ವಿಷಯ ತಿಳಿದು ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಅವರು ಸಂತ್ರಸ್ತರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್, ಗ್ರಾ.ಪಂ ಮಾಜಿ ಅಧ್ಯಕ್ಷೆ ರೀನಾ ತುಳಸಿ, ಉಪಾಧ್ಯಕ್ಷ ಮಹೇಶ್, ಶಕ್ತಿ ಕೇಂದ್ರದ ಅಧ್ಯಕ್ಷ ರೂಪೇಶ್, ಮುಖಂಡರಾದ ಅನಿಲ್ ಶೆಟ್ಟಿ, ಹರಿದಾಸ್, ದರ್ಶನ್ ದೇವಯ್ಯ ಮೊದಲಾದವರು ಹಾಜರಿದ್ದರು.