ವಿರಾಜಪೇಟೆ ಸುಣ್ಣದ ಬೀದಿಯಲ್ಲಿ ತಡೆಗೋಡೆ ಕಾಮಗಾರಿಗೆ ಗುದ್ದಲಿ ಪೂಜೆ
admincoorgdaily

ವಿರಾಜಪೇಟೆ: ರಾಜ್ಯ ವಿಪತ್ತು ಉಪಶಮನ ನಿಧಿ (SDMF) ಅಡಿಯಲ್ಲಿ 198.85 ಲಕ್ಷ ವೆಚ್ಚದಲ್ಲಿ ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಸುಣ್ಣದ ಬೀದಿಯಲ್ಲಿ ಕೈಗೆತ್ತಿಕೊಳ್ಳಲಿರುವ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಾಳೆಟೀರ ಬೋಪಣ್ಣ, ತಾಲೂಕು ಕೆಡಿಪಿ ಸದಸ್ಯರಾದ ರಫೀಕ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷರಾದ ಆರ್.ಕೆ. ಸಲಾಂ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಮಾಜಿ ಪುರಸಭೆ ಸದಸ್ಯರಾದ ರಜಿನಿಕಾಂತ್, ಪೃಥ್ವಿನಾಥ್, ಜಲೀಲ್ ಹಾಗೂ ದಿನೇಶ್, ಪಕ್ಷದ ಮುಖಂಡರಾದ ಶಬರೀಶ್ ಶೆಟ್ಟಿ, ಕುಂಡಚ್ಚಿರ ಮಂಜು ದೇವಯ್ಯ, ಹಮೀದ್, ಸಕ್ಲಿನ್ ಹಾಗೂ ವೀರಭದ್ರ, ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ಇಂಜಿನಿಯರ್ ಹೇಮಂತ್ ಕುಮಾರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ಸುಣ್ಣದ ಬೀದಿಯ ಸರ್ವ ಸದಸ್ಯರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.