ಹುದಿಕೇರಿ: ನೂತನವಾಗಿ ನಿರ್ಮಿಸಿದ ಬಸ್ ತಂಗುದಾಣ ಲೋಕಾರ್ಪಣೆ

ಪೊನ್ನಂಪೇಟೆ: ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು ಹುದಿಕೇರಿಯಲ್ಲಿ ನೂತನವಾಗಿ ನಿರ್ಮಿಸಿದ ಬಸ್ ತಂಗುದಾಣವನ್ನು ಲೋಕಾರ್ಪಣೆ ಮಾಡಿದರು.
ಬಸ್ ತಂಗುದಾಣ ಉದ್ಘಾಟಿಸಿ ಮಾತನಾಡಿದ ಶಾಸಕರು, ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಯ ಅಭೂತಪೂರ್ವ ಬೆಂಬಲವನ್ನು ಪಡೆಯುತ್ತಿದ್ದು ಮಹಿಳೆಯರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಬಸ್ ನಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರ ಅನುಕೂಲಕ್ಕಾಗಿ ಈ ನೂತನ ಬಸ್ ತಂಗುದಾಣ ನಿರ್ಮಿಸಿದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಅದೇ ರೀತಿ ಬಸ್ ತಂಗುದಾಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಅಷ್ಟೇ ಮುಖ್ಯವಾಗಿದ್ದು, ಸಾರ್ವಜನಿಕರು ಹಾಗೂ ಪಂಚಾಯತ್ ನವರು ಸ್ವಯಂ ಇದರ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಚಂಗುಲಂಡ ಸೂರಜ್, ಪಕ್ಷದ ಪ್ರಮುಖರಾದ ವಿಶು,ಸಂದೀಪ್,ಮನೋಹರ್, ರಮೇಶ್, ಪ್ರಭು, ರೀಕ್ಷಿತ್, ಮಂದಣ್ಣ, ಕಾವೇರಪ್ಪ, ಬೀಪಿನ್, ಕೃಷ್ಣ, ಮನು, ಸುರೇಶ್, ಮುತ್ತ, ಚೋಮ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.