ಅ.03 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ
admincoorgdaily

ಮಡಿಕೇರಿ:-ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 03 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಅಕ್ಟೋಬರ್, 03 ರಂದು ಬೆಳಗ್ಗೆ 10 ಗಂಟೆಗೆ ಬಿಟ್ಟಂಗಾಲದ ಕೂರ್ಗ್ ಯತ್ನಿಕ್ ಹಾಲ್(ಹಳೇ ಆರ್‍ಕೆಎಫ್) ಇಲ್ಲಿ ನಡೆಯುವ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ತಲಕಾವೇರಿ ಪವಿತ್ರ ತೀರ್ಥೋದ್ಭವ ಸಂಬಂಧ ಸಭೆ ನಡೆಸಲಿದ್ದಾರೆ. ಹಾಗೆಯೇ ಮಡಿಕೇರಿ ದಸರಾ ಉತ್ಸವ ಸಂಬಂಧಿಸಿದಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ.ಸಿ.ವಿರೂಪಾಕ್ಷ ಅವರು ತಿಳಿಸಿದ್ದಾರೆ.