Kodagu

ಸಿದ್ದಾಪುರ-ಅವರೆಗುಂದ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ

admincoorgdaily

ಸಿದ್ದಾಪುರ-ಅವರೆಗುಂದ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ
ಸಿದ್ದಾಪುರ:ಸಿದ್ದಾಪುರದ ಅವರೆಗುಂದ ಭಾಗದಲ್ಲಿ ಮಾನ್ಯ ಶಾಸಕರ ವಿಶೇಷ ಅನುದಾನದಡಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಇಂದು ನೆರವೇರಿಸಿದರು.

ಸುಮಾರು 50ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸಿದ್ದಾಪುರ–ಅವರೆಗುಂದ ಕಾಂಕ್ರೀಟ್ ರಸ್ತೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಮಾನ್ಯ ಶಾಸಕರು, ಈ ಭಾಗದ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಲಾಗಿದ್ದು, ಸಾರ್ವಜನಿಕರು ನೂತನ ರಸ್ತೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಲಭ್ಯವಾದ ಕೂಡಲೇ ಈ ಭಾಗದಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಉದ್ದೇಶ ಹೊಂದಿದ್ದು, ಸಾರ್ವಜನಿಕರ ಬೇಡಿಕೆಗಳಿಗೆ ಆದ್ಯತೆ ನೀಡಿ ಅವುಗಳನ್ನು ಈಡೇರಿಸಲು ತಾವು ಬದ್ಧರಾಗಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ವಲಯ ಅಧ್ಯಕ್ಷರಾದ ಪ್ರತೀಶ್, ಕಾವೇರಿ ಜಲಾನಯನ ಮಂಡಳಿಯ ನಿರ್ದೇಶಕರಾದ ಸೂರಜ್ ಹೊಸೂರು, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪಿ.ವಿ. ಜಾನ್ಸನ್, ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ತೆನ್ನಿರ ಮೈನಾ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಹನೀಫ್, ತಾಲೂಕು ಘಟಕದ ಅಧ್ಯಕ್ಷರಾದ ರಫೀಕ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಬಿಜೋಯ್, ಪ್ರಮುಖರಾದ ಕುಂಡಚ್ಚಿರ ಮಂಜು ದೇವಯ್ಯ, ವಿನೋದ್ ಕುಮಾರ್, ಮೊಹಮ್ಮದ್ ಆಲೀ, ಅಬ್ದುಲ್ ಸುಕೂರ್, ಪಳನಿ, ಚಿನ್ನಮ್ಮ, ಸತೀಶ್, ಆಪ್ರು ರವೀಂದ್ರ, ಚೆಕು, ಅನಿಲ್, ವೆಂಕಟೇಶ್, ಬಶೀರ್, ಜಾಫರ್, ರವಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.