Kodagu

ಸೋಮವಾರಪೇಟೆ ನವೀಕೃತ ಪಿಎಲ್‌ಡಿ ಬ್ಯಾಂಕ್ ಕಚೇರಿ ಉದ್ಘಾಟನೆ

admincoorgdaily

ಸೋಮವಾರಪೇಟೆ ನವೀಕೃತ ಪಿಎಲ್‌ಡಿ ಬ್ಯಾಂಕ್ ಕಚೇರಿ ಉದ್ಘಾಟನೆ
ಸೋಮವಾರಪೇಟೆ: ಶಾಸಕರ ನಿಧಿಯಡಿ 5 ಲಕ್ಷ ರೂ. ಸೇರಿದಂತೆ ಒಟ್ಟು 26 ಲಕ್ಷ ರೂ. ವೆಚ್ಚದಲ್ಲಿ ನವೀಕರಣಗೊಂಡಿರುವ ಸೋಮವಾರಪೇಟೆ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ) ಬ್ಯಾಂಕ್‌ನ ನೂತನ ಕಟ್ಟಡವನ್ನು ಶಾಸಕ ಡಾ. ಮಂತರ್ ಗೌಡ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಸಹಕಾರ ಕ್ಷೇತ್ರದ ಅಭಿವೃದ್ಧಿಯಿಂದ ಕೃಷಿ ಕ್ಷೇತ್ರವೂ ಅಭಿವೃದ್ಧಿ ಹೊಂದಲು ಸಾಧ್ಯ. ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಸದಸ್ಯರ ಶ್ರೇಯೋಭಿವೃದ್ಧಿಗೆ ನೀಡುತ್ತಿರುವ ಸೌಲಭ್ಯಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು. ನೂತನ ಕಟ್ಟಡದ ಮೂಲಕ ಸದಸ್ಯರಿಗೆ ಉತ್ತಮ ಸೇವೆ ಲಭ್ಯವಾಗಲಿ ಎಂದು ಆಶಿಸಿದರು.

ಬ್ಯಾಂಕಿನ ಅಧ್ಯಕ್ಷ ಬಿ.ಬಿ. ಸತೀಶ್ ಮಾತನಾಡಿ, ಕಟ್ಟಡ ನವೀಕರಣಕ್ಕೆ ಸಂಘದಿಂದ 21 ಲಕ್ಷ ರೂ. ಹಾಗೂ ಶಾಸಕ ಡಾ. ಮಂತರ್ ಗೌಡ ಅವರಿಂದ 5 ಲಕ್ಷ ರೂ. ಅನುದಾನ ಬಳಸಿಕೊಳ್ಳಲಾಗಿದೆ. ನವೀಕೃತ ಕಟ್ಟಡದ ಮೂಲಕ ಸದಸ್ಯರಿಗೆ ಹೆಚ್ಚಿನ ಸೇವೆ ಒದಗಿಸಲಾಗುವುದು ಎಂದರು.