ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ
admincoorgdaily

ಕುಶಾಲನಗರ,ಸೆ೨೯: ಇತ್ತೀಚಿನ ದಿನಗಳಲ್ಲಿ ಕುಶಾಲನಗರದ ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಸಕರಾದ ಡಾ.ಮಂತರ್ ಗೌಡರವರ ನೇತೃತ್ವದಲ್ಲಿ ಉತ್ತತಮಟ್ಟದ ಅಧಿಕಾರಿಗಳ ಸಭೆಯು ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆಯಿತು.
ಶಾಸಕರಾದ ಡಾ.ಮಂತರ್ ಗೌಡ ಮಾತನಾಡಿ, ಆನೆಕಾಡು ಅಪಘಾತಗಳ ಹೆಚ್ಚುತ್ತಿವೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸದಿರುವುದು ಕಾರಣ. ನೂರಾರು ಜನರು ಆನೆಕಾಡು ಬಳಿ ಸಾವಿಗೀಡಾಗಿದ್ದಾರೆ. ಇನ್ನು ಮುಂದೆ ಪ್ರಾಣಹಾನಿ ಸಂಭವಿಸಿದರೆ ಅಧಿಕಾರಿಗಳೇ ನೇರಹೊಣೆ. ಕೂಡಲೇ ಅಪಘಾತಗಳನ್ನು ತಡೆಗಟ್ಟುವ ದೃಷ್ಟಿಯಿಂದ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅಲ್ಲದೇ ಅಪಘಾತದಿಂದ ಮೃತಪಟ್ಟವರ ಮನೆಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡುವಂತೆ ಶಾಸಕರು ಸೂಚಿಸಿದರು.
ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ ಉಪಾವಿಭಾಗಾಧಿಕಾರಿ ಅಧಿಕಾರಿ ಸಂಜೀವ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು ಇದ್ದರು.