Kodagu

ಜಿಲ್ಲಾ ಪಂಚಾಯತ್ ಮೀಸಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯ; ಅಬ್ದುಲ್ ಅಕೀಂ ಆಕ್ರೋಶ

admincoorgdaily

ಅಬ್ದುಲ್ ಅಕೀಂ
ಸುಂಟಿಕೊಪ್ಪ: ಜಿಲ್ಲಾ ಪಂಚಾಯತ್ ಚುನಾವಣೆಯ ಮೀಸಲಾತಿ ಪ್ರಕ್ರಿಯೆಯಲ್ಲಿ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತ ಮುಖಂಡರಿಗೆ ಸ್ಪರ್ಧೆಗೆ ಅವಕಾಶವೇ ಇಲ್ಲದಾಗೆ ಮೀಸಲು ನಿಗದಿಯಾಗಿದೆ  ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಕೀಂ ಸುಂಟಿಕೊಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಗೆಲ್ಲುವ ಭದ್ರಕೋಟೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತ ಮತದಾರರು ಇರುವ ಕ್ಷೇತ್ರದಲ್ಲಿ ಘಟಾನುಘಟಿ ಅಲ್ಪಸಂಖ್ಯಾತ ಮುಖಂಡರಿದ್ದರೂ ಕೂಡ ಸ್ಪರ್ಧೆಗೆ ಅವಕಾಶವೇ ಇಲ್ಲದಾಗಿರುವುದು ಬೇಸರದ ಸಂಗತಿ ಎಂದಿದ್ದಾರೆ.

ಕಳೆದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅತಿ ಹೆಚ್ಚು ಮುನ್ನಡೆ ತಂದುಕೊಟ್ಟ ಕ್ಷೇತ್ರಗಳಲ್ಲೇ ಈ ಬಾರಿ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ  ಸ್ಪರ್ಧಿಸಲು ಅಲ್ಪಸಂಖ್ಯಾತರಿಗೆ ಮೀಸಲು ನಿಗದಿಯಾಗದಿರುವುದಕ್ಕೆ  ಆಕ್ರೋಶ ವ್ಯಕ್ತಪಡಿಸಿದ್ದಾರೆ.