Kodagu

ಸೆ.08 ರಂದು ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

admincoorgdaily

ಸೆ.08 ರಂದು ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ
ಮಡಿಕೇರಿ:-ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಲೋಕ ಶಿಕ್ಷಣ), ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಾಕ್ಷರತಾ ಪಾಕ್ಷಿಕ ಕಾರ್ಯಕ್ರಮವು ಸೆಪ್ಟೆಂಬರ್, 08 ರಂದು ಬೆಳಗ್ಗೆ 10 ಗಂಟೆಗೆ ಕುಶಾಲನಗರ ಪಿಎಂಶ್ರೀ ಶಾಲೆಯಲ್ಲಿ ನಡೆಯಲಿದೆ. 

ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಜಿ.ಪಂ. ಉಪಕಾರ್ಯದರ್ಶಿ ಅಬ್ದುಲ್ ನಬಿ, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಉಪ ನಿರ್ದೇಶಕರು(ಆಡಳಿತ) ಆರ್.ಪಿ.,ಮಹೇಶ್, ಕೂಡಿಗೆ ಡಯಟ್ ಉಪನಿರ್ದೇಶಕರು (ಅಭಿವೃದ್ಧಿ) ಹಾಗೂ ಪ್ರಾಂಶುಪಾಲರಾದ ರಾಮಚಂದ್ರರಾಜೇ ಅರಸ್ ಇತರರು ಪಾಲ್ಗೊಳ್ಳಲಿದ್ದಾರೆ.