ಎಸ್ಎಂಎಸ್ ವಿದ್ಯಾಸಂಸ್ಥೆಯಲ್ಲಿ‌ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಎಸ್ಎಂಎಸ್ ವಿದ್ಯಾಸಂಸ್ಥೆಯಲ್ಲಿ‌ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಕಡಂಗ: ವಿರಾಜಪೇಟೆ ತಾಲೂಕಿನ ಅರಮೇರಿ ಎಸ್ಎಂಎಸ್ ಅಕಾಡೆಮಿ ಆಫ್ ಸೆಂಟರಲ್ ಎಜುಕೇಶನ್ ಅರಮೇರಿ,ಕಳಂಚೇರಿ ಸಂಸ್ಥೆಯಲ್ಲಿ ಒಂದು ಭೂಮಿಗೆ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಅಂತರಾರಾಷ್ಟ್ರೀಯ ಯೋಗದಿ ನಾಚರಣೆಯ ಘೋಷ ವಾಕ್ಯದೊಂದಿಗೆ ವಿದ್ಯಾಸಂಸ್ಥೆಯಲ್ಲಿ ೧೧ನೇ ಅಂತರಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು, ಪ್ರಾಣಾಯಾಮಗಳ ಮೂಲಕ ಉತ್ತಮ ಆರೋಗ್ಯಕ್ಕಾಗಿ ಇವುಗಳನ್ನ ಜೀವನದಲ್ಲಿ ರೂಢಿಸಿಕೊಳ್ಳಬೇಕೆಂಬ ವಿಷಯಗಳನ್ನ ಹೇಳಿದರು. ಸಂಸ್ಥೆಯ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವರದಿ: ನೌಫಲ್