IPL 2025: ಎಲಿಮಿನೇಟರ್ ಪಂದ್ಯ ಮುಂಬೈ ತಂಡಕ್ಕೆ 20 ರನ್ ಗಳ ಭರ್ಜರಿ ಗೆಲುವು! ಎರಡನೇ ಕ್ವಾಲಿಫೈಯರ್ ಗೆ ಲಗ್ಗೆಯಿಟ್ಟ ಮುಂಬೈ ಇಂಡಿಯನ್ಸ್
ಮುಲ್ಲನ್ ಪುರ್: ಇಂಡಿಯನ್ ಪ್ರೀಮಿಯರ್ ಲೀಗ್ -2025 ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು 20 ರನ್ ಗಳ ಭರ್ಜರಿ ಗೆಲುವು ಸಾಧಿಸಿ ಎರಡನೇ ಕ್ವಾಲಿಫೈಯರ್ ಹಂತಕ್ಕೆ ಲಗ್ಗೆಯಿಟ್ಟಿದೆ.ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವು ನಿಗದಿತ 20 ಓವರ್ ಗಳಲ್ಲಿ 228 ರನ್ ಗಳನ್ನು ಕಲೆಹಾಕಿತು.229 ರನ್ ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್ ತಂಡವು 6 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿದರು.ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ತಂಡವು ಭಾನುವಾರ ಪಂಜಾಬ್ ತಂಡವನ್ನು ಎದುರಿಸಲಿದೆ.