IPL 2025: ಚೊಚ್ಚಲ ಐಪಿಎಲ್ ಕಿರೀಟಕ್ಕೆ ಮುತ್ತಿಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು 17 ವರ್ಷಗಳ ಬಳಿಕ ಈ ಸಲ ಕಪ್ ನಮ್ದೇ.
admincoorgdaily
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರು ರನ್ ಗಳಿಂದ ಗೆಲುವು ಸಾಧಿಸುವುದರ ಮೂಲಕ ಚೊಚ್ಚಲ ಐಪಿಎಲ್ ಕಿರೀಟಕ್ಕೆ ಮುತ್ತಿಟ್ಟಿದೆ.17 ವರ್ಷಗಳ ಬಳಿಕ ಬೆಂಗಳೂರು ತಂಡವು ಐಪಿಎಲ್ ಪ್ರಶಸ್ತಿ ಗೆಲ್ಲುವುದರ ಮೂಲಕ ಐಪಿಎಲ್ ಟ್ರೋಫಿಯ ಬರ ನೀಗಿಸಿದೆ.ಮೊದಲ ಪ್ರಶಸ್ತಿಯ ಕನಸಿನಲ್ಲಿದ್ದ ಪಂಜಾಬ್ ತಂಡಕ್ಕೆ ನಿರಾಸೆಯುಂಟಾಗಿದೆ.ಆರ್.ಸಿ.ಬಿ ತಂಡದ ಮಾರಕ ಬೌಲಿಂಗ್ ದಾಳಿಗೆ ಪಂಜಾಬ್ ಆಟಗಾರರು ಮಂಕಾಗಿ ಸೋಲುಪ್ಪಿಕೊಂಡಿದ್ದಾರೆ.ಕೊನೆಗೂ ಈ ಸಲ ಕಪ್ ನಮ್ದೇ ಎಂಬ ಘೋಷವಾಕ್ಯ ಸಾರ್ಥಕಗೊಂಡಿದೆ.