ಶಾಸಕ ಎಎಸ್ ಪೊನ್ನಣ್ಣ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಇಸ್ಮಾಯಿಲ್ ನಾಪೋಕ್ಲು
admincoorgdaily

ವಿರಾಜಪೇಟೆ: ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನೂತನ ನಿರ್ದೇಶಕರಾಗಿ ನೇಮಕಗೊಂಡಿರುವ ಇಸ್ಮಾಯಿಲ್ ನಾಪೋಕ್ಲು ಅವರು ಇಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿಯಾಗಿ, ತಮ್ಮ ನೇಮಕಾತಿಗೆ ಸಹಕಾರ ಹಾಗೂ ಬೆಂಬಲ ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರು ಶ್ರೀ ಇಸ್ಮಾಯಿಲ್ ಅವರಿಗೆ ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಂತಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಪಕ್ಷದ ಮುಖಂಡರಾದ ಕೋಡಿರ ವಿನೋದ್ ನಾಣಯ್ಯ, ಶಾಫಿ ಎಡಪಾಲ, ಮೊಹಮ್ಮದ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.