Kodagu

ಕೊಡಗು ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅಧಿಕಾರ ಸ್ವೀಕಾರ

admincoorgdaily

ಕೊಡಗು ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅಧಿಕಾರ ಸ್ವೀಕಾರ

ಮಡಿಕೇರಿ;ಕೊಡಗು ಜಿಲ್ಲೆಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.
      ಜಯಲಕ್ಷ್ಮಿ ಅವರು ಕರ್ನಾಟಕ ನಾಗರಿಕ ಸೇವೆಯ 2014 ನೇ ಬ್ಯಾಚ್ ನವರಾಗಿದ್ದು, ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತ್ ನಲ್ಲಿ ಉಪ ಕಾರ್ಯದರ್ಶಿಯಾಗಿ,
       ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.