Kodagu

ಸಿದ್ದಾಪುರ: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

admincoorgdaily

ಸಿದ್ದಾಪುರ: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆಸಿದ್ದಾಪುರ;ಕೆರೆಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಸಮೀಪದ ಚೌಡಿಕಾಡು ತೋಟದಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಕೇರಳದ ಕಣ್ಣೂರು ಜಿಲ್ಲೆಯ ಶ್ರೀಜೇಶ್ (45) ಎಂದು ಗುರುತಿಸಲಾಗಿದೆ.

 ಗಾರೆ ಕೆಲಸ ಮಾಡುತ್ತಿದ್ದ ಇವರು ಇತ್ತೀಚೆಗೆ ಚೌಡಿಕಾಡು ತೋಟದಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಮಾನಸಿಕ ಒತ್ತಡದ ಕಾರಣದಿಂದ ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ. ಸಿದ್ದಾಪುರ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.