ಉದ್ಯೋಗವಕಾಶ; ಜು.21 ರಂದು ಕಲ್ಯಾಣಿ ಮೋಟರ್ಸ್ ನಿಂದ ನೇರ ಸಂದರ್ಶನ

ಮಡಿಕೇರಿ:-ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಖಾಸಗಿ ಕಂಪನಿಯಾದ ಕಲ್ಯಾಣಿ ಮೋಟರ್ಸ್ ಅವರು ತಮ್ಮಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಕಾರ್ಯಕ್ರಮವು ಜುಲೈ, 21 ರಂದು ಬೆಳಗ್ಗೆ 10.30 ಗಂಟೆಗೆ ಕಲ್ಯಾಣಿ ಮೋಟರ್ಸ್, ವೈವಸ್ ಆಸ್ಪತ್ರೆ ಹತ್ತಿರ ಇಲ್ಲಿ ಏರ್ಪಡಿಸಲಾಗಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ 18 ರಿಂದ 40 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ಅಭ್ಯರ್ಥಿಗಳು 01 ಸೆಟ್ ರೆಸ್ಯೂಮ್‍ಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿಯ ಮೊಬೈಲ್ ಸಂಖ್ಯೆ: 8296020826 ಅನ್ನು ಸಂಪರ್ಕಿಸಬಹುದಾಗಿದೆ. ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.