ಕಡಂಗ:ರಸ್ತೆಯ ಗುಂಡಿ ಮುಚ್ಚಿದ ಯುವಕರು

ಕಡಂಗ: ಕಳೆದ 3 -4 ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಕಡಂಗ ಮುಹ್ಯದ್ದಿನ್ ಜುಮಾ ಮಸೀದಿ ಮತ್ತು ಅಂಗನವಾಡಿ ಮುಂಭಾಗದ ರಸ್ತೆಯಲ್ಲಿ ನಿಂತಿರುವ ನೀರಿನಿಂದ ಆ ಭಾಗದಲ್ಲಿರುವ ರಸ್ತೆಗಳು ಸಂಪೂರ್ಣ ಹದೆಗೆಟ್ಟು ಸಂಚಾರಕ್ಕೆ ತೊಡಕುಂಟಾಗಿತ್ತು.
ಈ ಸಮಸ್ಯೆಯನ್ನು ಗಮನಿಸಿದ ಸ್ಥಳೀಯ ಯುವಕರ ತಂಡ ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.ಯುವಕರ ಈ ಕೆಲಸಕ್ಕೆ ಗ್ರಾಮಸ್ಥರು ಹಾಗೂ ವಾಹನ ಚಾಲಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸಾಬೀತ್, ಸಬೀಬ್, ಆಜ್ಮಿಲ್, ಜುನೈದ್, ಸೂಫಿಯನ್ ಗುಂಡಿ ಮುಚ್ಚುವ ಕಾರ್ಯದಲ್ಲಿ ಭಾಗವಹಿಸಿದ್ದರು.ಚರಂಡಿ ಹಾಗೂ ರಸ್ತೆ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಕೊಡಲೇ ಸರಿಪಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವರದಿ:ನೌಫಲ್