ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
admincoorgdaily

ವಿರಾಜಪೇಟೆ: ವಿರಾಜಪೇಟೆಯ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯಲ್ಲಿರುವ ಕರ್ನಾಟಕ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕರ್ನಾಟಕ ಸಂಘದ ಅಧ್ಯಕ್ಷರಾದ ಮಾಳೇಟಿರ ಎಂ. ಬೆಲ್ಲು ಬೋಪಯ್ಯ ಅವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕರ್ನಾಟಕ ಸಂಘದ ಅಧ್ಯಕ್ಷರಾದ ಮಾಳೇಟಿರ ಎಂ. ಬೆಲ್ಲು ಬೋಪಯ್ಯ ಅವರು, "ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಪ್ರಮುಖ ಜವಾಬ್ದಾರಿಯಾಗಿದೆ. ಗಡಿಭಾಗದಲ್ಲೂ ಕನ್ನಡದ ಕಂಪನ್ನು ಪಸರಿಸಲು ಕರ್ನಾಟಕ ಸಂಘವು ನಿರಂತರವಾಗಿ ಶ್ರಮಿಸುತ್ತಿದ್ದು, ಕನ್ನಡಿಗರೆಲ್ಲರೂ ಒಗ್ಗಟ್ಟಿನಿಂದ ಕನ್ನಡಪರ ಚಟುವಟಿಕೆಗಳನ್ನು ಮುನ್ನಡೆಸಬೇಕು," ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಚೇನಂಡ ಈ. ಗಿರೀಶ್ ಪೂಣಚ್ಚ, ಕಾರ್ಯದರ್ಶಿ ಮುಂಡಿಯೋಳಂದ ಕುಸುಮ ಸೋಮಣ್ಣ, ಕೋಶಾಧಿಕಾರಿ ಕೋಟೇರ ಯು. ಗಣೇಶ್ ತಮ್ಮಯ್ಯ ಹಾಗೂ ನಿರ್ದೇಶಕರುಗಳಾದ ಚಿಲ್ಲವಂಡ ಪಿ. ಕಾವೇರಪ್ಪ, ಚೇನಂಡ ಎಂ. ಸುರೇಶ್ ನಾಣಯ್ಯ, ಪುಗ್ಗೇರ ಎಸ್. ನಂದ, ಮುಂಡಂಡ ರಾಣಿ ಮಂದಣ್ಣ, ಬಿ ಎಂ. ಸುರೇಶ್, ಬಾಚೀರ ಗಣೇಶ್ ಬಿದ್ದಪ್ಪ , ಕಂಜಿತಂಡ ಎಂ. ಮೊಣ್ಣಪ್ಪ (ಗಿಣಿ), ಮೂಕಚಂಡ ಬಿ. ದೇವಯ್ಯ (ಚುಮ್ಮಿ), ಚಾರಿಮಂಡ ಯು. ಶರಣು ನಂಜಪ್ಪ, ಬಲ್ಲಡಿಚಂಡ ಜಿ. ವಿಜು ಕುಶಾಲಪ್ಪ ಮತ್ತು ಪೋರೇರ ಎಂ. ಬಿದ್ದಪ್ಪ, ಕಚೇರಿ ಸಿಬ್ಬಂದಿ ಪವಿತ್ರ ಉಪಸ್ಥಿತರಿದ್ದರು.