Kodagu

ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ

admincoorgdaily

ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ
ವಿರಾಜಪೇಟೆ; ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಸಂಘದ ವತಿಯಿಂದ ನವೆಂಬರ್ 2 ರಂದು ವಿರಾಜಪೇಟೆ ಮಹಿಳಾ ಸಮಾಜದಲ್ಲಿ ಶಾಲಾ ಕಾಲೇಜುಗಳಿಗೆ ಮತ್ತು ಸಾರ್ವಜನಿಕರಿಗೆ ತಾಲೂಕು ಮಟ್ಟದ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಮಾಳೇಟಿರ ಬೆಲ್ಲು ಬೋಪಯ್ಯ ತಿಳಿಸಿದ್ದಾರೆ.

ಪೂರ್ವಹ್ನ 10 ಗಂಟೆಗೆ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸಂಘದ ಅಧ್ಯಕ್ಷರಾದ ಮಾಳೇಟಿರ ಬೆಲ್ಲು ಬೋಪಯ್ಯ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ  ಕೊಡಗು-ಮೈಸೂರು ಸಂಸದ ಉದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಅರಮೇರಿ ಕಳಂಚೇರಿ ಮಠಾಧೀಶರಾದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ,  ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ಪಟ್ಟಚೆರವಂಡ ನಾಚಪ್ಪ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಒಲಂಪಿಯನ್ ಕೂತಂಡ ಪೂಣಚ್ಚ (ಕ್ರೀಡೆ) ಬಾಚುರ ಎಸ್ ಪೂಣಚ್ಚ (ಸೇನೆ), ಚೆನ್ನಯ್ಯನ ಕೋಟೆ ಸರ್ಕಾರಿ ಪ್ರೌಡಶಾಲಾ ಶಿಕ್ಷಕಿ ಕವಿತಾ ಕೆ.ಡಿ (ಶಿಕ್ಷಣ), ಬಾದುಮಂಡ ಬೀನಾ ಕಾಳಯ್ಯ (ಸಾಹಿತ್ಯ), ಇವರುಗಳನ್ನು ಸನ್ಮಾನಿಸಲಾಗುವುದು.

*ತಾಲೂಕು ಮಟ್ಟದ ಸ್ಪರ್ಧಾ ಕಾರ್ಯಕ್ರಮಗಳು:* ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಕ್ಕೆ ಕನ್ನಡ ನಾಡಗೀತೆಗೆ ಸಾಮೂಹಿಕ ನೃತ್ಯ(ಒಂದು ಶಾಲೆಯಿಂದ 9 ವಿದ್ಯಾರ್ಥಿಗಳ ಒಂದು ತಂಡ), ಕಾಲೇಜು ವಿಭಾಗಕ್ಕೆ ಕನ್ನಡ ನಾಡಗೀತೆಗೆ ಸಾಮೂಹಿಕ ನೃತ್ಯ (ಒಂದು ಕಾಲೇಜಿನಿಂದ 9 ವಿದ್ಯಾರ್ಥಿಗಳ ಒಂದು ತಂಡ)ಕ್ಕೆ ಮಾತ್ರ ಅವಕಾಶ ನೀಡಲಾಗುವುದು. ಸಾರ್ವಜನಿಕರಿಗೆ ಕೊಡವ ಹಾಗೂ ಕನ್ನಡ ಹಾಡು, (ಒಬ್ಬರಿಗೆ ಒಂದು ಹಾಡು ಮಾತ್ರ).

ಸ್ಪರ್ಧೇಯಲ್ಲಿ ಭಾಗವಹಿಸುವವರು ಸಂಘದ ಕಚೇರಿಯಲ್ಲಿ ತಮ್ಮ ಹೆಸರನ್ನು ನೋದಾಯಿಸಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷರಾದ ಮಾಳೇಟಿರ ಬೆಲ್ಲು ಬೋಪಯ್ಯ ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಮಖ್ಯೆಯಲ್ಲಿ ಕನ್ನಡಾಭಿಮಾನಿಗಳು ಆಗಮಿಸಿ ಕಾರ್ಯಕ್ರಮದ ಯಸಶ್ಸಿಗೆ ಸಹಕರಿಸಬೇಕು ಎಂದು ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯವರು ಕೋರಿದ್ದಾರೆ.