Kodagu

ಚಾಕು ಇರಿತ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

admincoorgdaily

ಚಾಕು ಇರಿತ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಪೊನ್ನಂಪೇಟೆ: ನ. 21ರಂದು ಪೊನ್ನಂಪೇಟೆಯ ಮಧ್ಯದ ಅಂಗಡಿಯೊಂದರಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ತೂಚಮಕೇರಿ ಗ್ರಾಮದ ಚೆಂಡಮಾಡ ದೀಪು ಎಂಬುವವರಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಹರಿಹರ ಗ್ರಾಮದ ಮನ್ನೇರ ಕಾಳಪ್ಪ ಎಂಬುವನನ್ನು ಪೊನ್ನಂಪೇಟೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳುಹಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಹಾಗೂ ಗೋಣಿಕೊಪ್ಪಲು ವೃತ್ತ ನಿರೀಕ್ಷಕರ ನಿರ್ದೇಶನದಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆಯ ಎಎಸ್‌ಐ ಹಾಗೂ ಸಿಬ್ಬಂದಿಗಳು ಪತ್ತೆ ಹಚ್ಚಿ ಬಂಧಿಸಿದ್ದಾರೆ.