Kodagu

ಕೊಡಗು ಕಾಂಗ್ರೆಸ್ ನಿಯೋಗದಿಂದ ಸಿಎಂ ಭೇಟಿ; ಭವನ ನಿರ್ಮಾಣಕ್ಕೆ ಧನಸಹಾಯಕ್ಕೆ ಮನವಿ

admincoorgdaily

ಕೊಡಗು ಕಾಂಗ್ರೆಸ್ ನಿಯೋಗದಿಂದ ಸಿಎಂ ಭೇಟಿ; ಭವನ ನಿರ್ಮಾಣಕ್ಕೆ ಧನಸಹಾಯಕ್ಕೆ ಮನವಿ
ಬೆಂಗಳೂರು: ಕೊಡಗು ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ನಿಯೋಗ ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಯಿತು.

ನಿಯೋಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೊಲ್ಯದ ಗಿರೀಶ್ ಮತ್ತು ಎಸ್.ಐ.ಮುನೀರ್ ಅಹಮದ್, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್ ಹಾಗೂ ಜಿಲ್ಲಾ ಕಾಂಗ್ರೆಸ್ ಸದಸ್ಯ ಚೊಟ್ಟೆಯಂಡಮಾಡ ವಿಷು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಧನಸಹಾಯ ಮಾಡುವಂತೆ ಮನವಿ ಸಲ್ಲಿಸಲಾಯಿತು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ನೂತನ ಭವನದ ರೂಪುರೇಷೆಗಳ ಬಗ್ಗೆ ಮಾಹಿತಿ ಪಡೆದಿದ್ದು, ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡುವುದರೊಂದಿಗೆ ಧನಸಹಾಯ ಮಾಡುವುದಾಗಿ ಭರವಸೆ ನೀಡಿದರು.