Kodagu

ನ.21 ರಿಂದ ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

admincoorgdaily

ನ.21 ರಿಂದ ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನವೆಂಬರ್ 21 ರಿಂದ 23 ರವರೆಗೆ ವಾರ್ಷಿಕ ಕ್ರೀಡಾಕೂಟ-2026 ನಗರದ ಕೊಡಗು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದೆ.

ನವೆಂಬರ್ 21 ರಂದು ಬೆಳಗ್ಗೆ 9 ಗಂಟೆಗೆ ಕೊಡಗು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.
ನವೆಂಬರ್ 23 ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮೈಸೂರಿನ ದಕ್ಷಿಣ ವಲಯದ ಪೊಲೀಸ್ ಮಹಾನಿರೀಕ್ಷಕರಾದ ಡಾ.ಬೋರಲಿಂಗಯ್ಯ ಎಂ.ಬಿ. ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.