Kodagu

ಅನುದಾನ ರಹಿತ ಶಾಲೆಗಳ ಸಮಸ್ಯೆ ಪರಿಹಾರಕ್ಕೆ ಭರವಸೆ: ಶಾಸಕ ಪೊನ್ನಣ್ಣ, ಶಿಕ್ಷಣ ಕಾರ್ಯದರ್ಶಿ ಭೇಟಿ ಮಾಡಿದ ಕೊಡಗು ಖಾಸಗಿ ಶಾಲೆಗಳ ಒಕ್ಕೂಟ

admincoorgdaily

ಅನುದಾನ ರಹಿತ ಶಾಲೆಗಳ ಸಮಸ್ಯೆ ಪರಿಹಾರಕ್ಕೆ ಭರವಸೆ: ಶಾಸಕ ಪೊನ್ನಣ್ಣ, ಶಿಕ್ಷಣ ಕಾರ್ಯದರ್ಶಿ ಭೇಟಿ ಮಾಡಿದ ಕೊಡಗು ಖಾಸಗಿ ಶಾಲೆಗಳ ಒಕ್ಕೂಟ
ಬೆಂಗಳೂರು: ಕೊಡಗು ಜಿಲ್ಲಾ ಅನುದಾನ ರಹಿತ ಶಾಲೆಗಳ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ವತಿಯಿಂದ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿ ಶಿಕ್ಷಣ ಕ್ಷೇತ್ರದ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.

ಈ ವೇಳೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರು ಸಹ ಉಪಸ್ಥಿತರಿದ್ದರು.

ಅನುದಾನ ರಹಿತ ಶಾಲೆಗಳ ನವೀಕರಣ (Renewal) ಮತ್ತು ಆರ್‌ಟಿಇ ಮರುಪಾವತಿ (RTE Reimbursement) ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು. ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸುವುದಾಗಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭರವಸೆ ನೀಡಿದರು.

ಶಾಲೆಗಳ ಸಮಸ್ಯೆಗಳನ್ನು ಆಲಿಸಿ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕ ಪೊನ್ನಣ್ಣ ಹಾಗೂ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರಿಗೆ ಅಸೋಸಿಯೇಷನ್ ವತಿಯಿಂದ ಧನ್ಯವಾದ ಸಲ್ಲಿಸಲಾಯಿತು.

ಸಭೆಯಲ್ಲಿ ಅಸೋಸಿಯೇಷನ್ ಅಧ್ಯಕ್ಷ ಕೋಟ್ರಂಗಡ ತಿಮ್ಮಯ್ಯ, ಸದಸ್ಯರಾದ ಮಾದಂಡ ತಿಮ್ಮಯ್ಯ, ಮಲ್ಲಂಗಡ ನಿರನ್ ಉತ್ತಪ್ಪ, ಸಚಿನ್ ವಾಸುದೇವ್ ಉಪಸ್ಥಿತರಿದ್ದರು.