ಕೊಡಗು ವಿಶ್ವವಿದ್ಯಾಲಯ ಜ್ಞಾನ ಕಾವೇರಿ ಕ್ಯಾಂಪಸ್‌ನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆ
admincoorgdaily

ಕುಶಾಲನಗರ: ವಿದ್ಯಾರ್ಥಿ ಜೀವನದಲ್ಲಿ ಸತ್ಯ, ಅಹಿಂಸೆ, ಶಾಂತಿ, ಶಿಸ್ತು ಮುಂತಾದ ಸದ್ಗುಣಗಳನ್ನು ಮೈಗೂಡಿಸಿಕೊಂಡು ಉತ್ತಮ ಮಾರ್ಗದಲ್ಲಿ ನಡೆಯುವ ಮೂಲಕ ಮಹಾತ್ಮ ಗಾಂಧೀಜಿಯವರ ಕನಸ್ಸನ್ನು ನನಸು ಮಾಡಿ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಆದ ಡಾ. ಸುರೇಶ್ ಎಂ ತಿಳಿಸಿದರು.
ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ಜರುಗಿದ ಗಾಂಧಿ ಜಯಂತಿ ಹಾಗೂ ೧೧೨ನೇ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ಯುವ ಸಮುದಾಯ ಗಾಂಧೀಜಿಯವರ ಆದರ್ಶ ಪಾಲಿಸಬೇಕು. ಜೊತೆಗೆ ಎಲ್ಲಾ ವರ್ಗದ ವಿದ್ಯಾರ್ಥಿಗಳು ಗಾಂಧೀಜಿಯವರಂತೆ ಪ್ರಾಮಾಣಿಕತೆ ಹಾಗೂ ಶಿಸ್ತನ್ನು ಬೆಳೆಸಿಕೊಂಡು ಭಾರತದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ನುಡಿದರು.
ಇದೇ ಸಂದರ್ಭದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.