Kodagu

ವಿಭಾಗ ಮಟ್ಟದ ಬ್ರಾಸ್ ಬ್ಯಾಂಡ್ ಸ್ಪರ್ಧೆಯಲ್ಲಿ ಕೊಡಗು ವಿದ್ಯಾಲಯಕ್ಕೆ ಪ್ರಥಮ ಸ್ಥಾನ; ರಾಜ್ಯಮಟ್ಟಕ್ಕೆ ಆಯ್ಕೆ

admincoorgdaily

ವಿಭಾಗ ಮಟ್ಟದ ಬ್ರಾಸ್ ಬ್ಯಾಂಡ್ ಸ್ಪರ್ಧೆಯಲ್ಲಿ ಕೊಡಗು ವಿದ್ಯಾಲಯಕ್ಕೆ ಪ್ರಥಮ ಸ್ಥಾನ; ರಾಜ್ಯಮಟ್ಟಕ್ಕೆ ಆಯ್ಕೆ
ಮಡಿಕೇರಿ;ಕೊಡಗು ವಿದ್ಯಾಲಯದ ಬ್ರಾಸ್ ಬ್ಯಾಂಡ್ ತಂಡವು ಕುಶಾಲನಗರದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಬಾಲಕರ ಬ್ರಾಸ್ ಬ್ಯಾಂಡ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಶಾಲೆಗೆ ಹೆಮ್ಮೆ ಹಾಗೂ ಗೌರವ ತಂದಿದೆ.
ತಂಡದ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾದರು.

 ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಕೊಡಗು ವಿದ್ಯಾಲಯದ ತಂಡವು ರಾಜ್ಯಮಟ್ಟದ ಸ್ಪರ್ಧೆಗೆ ಮೈಸೂರು ವಿಭಾಗವನ್ನು ಪ್ರತಿನಿಧಿಸಲು ಅರ್ಹತೆ ಪಡೆದಿದೆ.
 ತಂಡದ ವಿದ್ಯಾರ್ಥಿಗಳ ಪರಿಶ್ರಮ, ಶಿಸ್ತು, ಏಕಾಗ್ರತೆ ಹಾಗೂ ತರಬೇತಿಯ ಫಲವಾಗಿ ಈ ಯಶಸ್ಸು ದೊರೆತಿದ್ದು, ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವ ವಿಶ್ವಾಸವಿದೆ ಎಂದು ಶಾಲಾ ಪ್ರಾಂಶುಪಾಲರು ತಿಳಿಸಿದ್ದಾರೆ.