ಕೊಡಗು ಯುವ ಸೇನಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಆಚರಣೆ
admincoorgdaily


ಮಡಿಕೇರಿ: ಕೊಡಗು ಯುವ ಸೇನಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನಾಚರಣೆಯನ್ನು ಜಿಲ್ಲಾದ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಿಹಿ ಹಂಚಲಾಯಿತು.
ವಿರಾಜಪೇಟೆಯ ಗಣಪತಿ ದೇವಾಲಯದಲ್ಲಿ ವಿರಾಜಪೇಟೆ ತಾಲೂಕು ಸಮಿತಿ ವತಿಯಿಂದ ಪುಷ್ಪಾರ್ಚನೆ ಸಲ್ಲಿಸಿ ವಿಶೇಷ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯುವ ಸೇನಾ ಮುಖಂಡ ಕುಲದೀಪ್ ಪೂಣಚ್ಚ, ಮೋದಿಜಿ ಅವರು 25 ವರ್ಷಗಳಿಂದ ರಾಜಕೀಯದಲ್ಲಿ ಯಾವುದೇ ಬಿಡುವಿಲ್ಲದೆ ದೇಶಕ್ಕಾಗಿ ಕೆಲಸ ಮಾಡುತ್ತಿದ್ದಾರೆ, ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸೋಣ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಮಾಚಟ್ಟೀರ ಸಚಿನ್ ಮಂದಣ್ಣ, ತಾಲೂಕು ಅಧ್ಯಕ್ಷ ತೆಕ್ಕೇರ ಜೀವನ್ ನಾಣಯ್ಯ, ಪ್ರಮುಖರಾದ ಪೂಜಿತ್ ರೈ, ವೇಣು ಮಂಜಪ್ಪ ಹಾಗೂ ಕಾರ್ಯಕರ್ತರು ಹಾಜರಿದ್ದರು.
ಸೋಮವಾರಪೇಟೆ ತಾಲೂಕಿನಲ್ಲಿ ನಗರದ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ ಸಿಹಿ ಹಂಚಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಕೆ.ವಿ. ಮಂಜುನಾಥ್, ತಾಲೂಕು ಅಧ್ಯಕ್ಷ ಶೇಖರ್, ಕಾರ್ಯದರ್ಶಿ ಕೆ.ವಿ. ಪ್ರಭಾಕರ್, ಮಾಜಿ ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಸಿ.ಡಿ. ನೆಹರು, ಗಂಗಾಧರ ಹಾಗೂ ಸಂಘಟಕರಾದ ಗಣೇಶ್, ತೇಜು, ಎಲ್.ಐ.ಸಿ. ರಾಜು, ವಿನಿಲ್ ಅಮ್ಮಣ್ಣ ಹಾಜರಿದ್ದರು.
ಮಡಿಕೇರಿ ತಾಲೂಕು ಘಟಕದ ವತಿಯಿಂದ ನಗರದ ಕೋಟೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಜಯಣ್ಣ ಡಿ., ಕಾರ್ಯದರ್ಶಿ ಹೇಮಂತಕುಮಾರ್, ರಮೇಶ್ ಹಾಗೂ ಇತರ ಕಾರ್ಯಕರ್ತರು ಹಾಜರಿದ್ದರು.